1 John · chapter 2 · verse 3
1 John 2:3 in Kannada
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
Naavu aatana aajnyegalannu kaikondu nadeyu vadarindale aatanannu ballavaraagiddevendu tilu kollutteve.
1 John 2:3 in English
- King James Version (KJV)
- And hereby we do know that we know him, if we keep his commandments.
- World English Bible (WEB)
- This is how we know that we know him: if we keep his commandments.
- American Standard Version (ASV)
- And hereby we know that we know him, if we keep his commandments.
- Bible in Basic English (BBE)
- And by this we may be certain that we have knowledge of him, if we keep his laws.
- Darby Translation (DBY)
- And hereby we know that we know him, if we keep his commandments.
- Webster's Bible (WBS)
- And by this we do know that we know him, if we keep his commandments.
- Young's Literal Translation (YLT)
- and in this we know that we have known him, if his commands we may keep;
Read in context
- 1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- 4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- 5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
Cross references
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- Luke 6:46 ಲೂಕನು 6:46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
- 1 John 4:13 1 ಯೋಹಾನನು 4:13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- 1 John 3:22–24 1 ಯೋಹಾನನು 3:22–24ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- 1 John 2:4–6 1 ಯೋಹಾನನು 2:4–6ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ. ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 1 John 3:19 1 ಯೋಹಾನನು 3:19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.