1 John · chapter 2 · verse 9
1 John 2:9 in Kannada
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
Belakinalliddenendu helikondu tanna sahodaranannu dveshisuvavanu eevaregoo kattaleyalliddaane.
1 John 2:9 in English
- King James Version (KJV)
- He that saith he is in the light, and hateth his brother, is in darkness even until now.
- World English Bible (WEB)
- He who says he is in the light and hates his brother is in the darkness even until now.
- American Standard Version (ASV)
- He that saith he is in the light and hateth his brother, is in the darkness even until now.
- Bible in Basic English (BBE)
- He who says that he is in the light, and has hate in his heart for his brother, is still in the dark.
- Darby Translation (DBY)
- He who says he is in the light, and hates his brother, is in the darkness until now.
- Webster's Bible (WBS)
- He that saith he is in the light, and hateth his brother, is in darkness even until now.
- Young's Literal Translation (YLT)
- he who is saying, in the light he is, and his brother is hating, in the darkness he is till now;
Read in context
- 7ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
- 8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- 9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
- 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
- 11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
Cross references
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 1 John 2:11 1 ಯೋಹಾನನು 2:11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- 1 John 3:13–17 1 ಯೋಹಾನನು 3:13–17ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- 2 Peter 1:9 2 ಪೇತ್ರನು 1:9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- 1 Corinthians 13:1–3 1 ಕೊರಿಂಥದವರಿಗೆ 13:1–3ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 1 John 2:4 1 ಯೋಹಾನನು 2:4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- 1 John 1:6 1 ಯೋಹಾನನು 1:6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
- Romans 2:18–21 ರೋಮಾಪುರದವರಿಗೆ 2:18–21ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- John 9:41 ಯೋಹಾನನು 9:41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.