1 John · chapter 3 · verse 12
1 John 3:12 in Kannada
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
Keduka naagiddu tanna tammanannu konduhaakida kaayina nante alla. Yaava kaaranadinda avanannu kondu haakidanu? Tanna krutyagalu kettavugaloo tanna tammana krutyagalu neetiyullavugaloo aagiddadarindale.
1 John 3:12 in English
- King James Version (KJV)
- Not as Cain, [who] was of that wicked one, and slew his brother. And wherefore slew he him? Because his own works were evil, and his brother’s righteous.
- World English Bible (WEB)
- unlike Cain, who was of the evil one and killed his brother. Why did he kill him? Because his deeds were evil, and his brother’s righteous.
- American Standard Version (ASV)
- not as Cain was of the evil one, and slew his brother. And wherefore slew he him? Because his works were evil, and his brother’s righteous.
- Bible in Basic English (BBE)
- Not being of the Evil One like Cain, who put his brother to death. And why did he put him to death? Because his works were evil and his brother's works were good.
- Darby Translation (DBY)
- not as Cain was of the wicked one, and slew his brother; and on account of what slew he him? because his works were wicked, and those of his brother righteous.
- Webster's Bible (WBS)
- Not as Cain, [who] was of that wicked one, and slew his brother. And why did he slay him? Because his own works were evil, and his brother's righteous.
- Young's Literal Translation (YLT)
- not as Cain — of the evil one he was, and he did slay his brother, and wherefore did he slay him? because his works were evil, and those of his brother righteous.
Read in context
- 10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- 11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
- 12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- 13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
- 14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Cross references
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- Genesis 4:4–15 ಆದಿಕಾಂಡ 4:4–15ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು. ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ. ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ. ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು. ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ. ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು. ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
- Proverbs 29:27 ಜ್ಞಾನೋಕ್ತಿಗಳು 29:27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Genesis 4:25 ಆದಿಕಾಂಡ 4:25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- Luke 11:51 ಲೂಕನು 11:51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Proverbs 29:10 ಜ್ಞಾನೋಕ್ತಿಗಳು 29:10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Psalm 38:20 ಕೀರ್ತನೆಗಳು 38:20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- Matthew 13:38 ಮತ್ತಾಯನು 13:38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- John 15:19–25 ಯೋಹಾನನು 15:19–25ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
Original words (Greek)
- Not · G3756οὐ ou
- as · G2531καθώς kathṓs
- Cain · G2535Κάϊν Káïn
- was · G2258ἦν ēn
- of · G1537ἐκ ek
- one · G4190πονηρός ponērós
- and · G2532καί kaí
- slew · G4969σφάζω spházō
- his · G846αὐτός autós
- brother · G80ἀδελφός adelphós
- And · G2532καί kaí
- wherefore · G5484χάριν chárin
- he · G4969σφάζω spházō
- him · G846αὐτός autós
- Because · G3754ὅτι hóti
- own · G846αὐτός autós
- works · G2041ἔργον érgon
- were · G2258ἦν ēn
- evil · G4190πονηρός ponērós
- and · G1161δέ dé
- his · G846αὐτός autós
- brother’s · G80ἀδελφός adelphós
- righteous · G1342δίκαιος díkaios