1 John · chapter 3 · verse 18
1 John 3:18 in Kannada
ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
Nanna chikka makkale, neevu maatinindaagali naaligeyindaagali preetisuvavaraagirade kriyeyalliyoo satyada lliyoo preetisuvavaraagirabeku.
1 John 3:18 in English
- King James Version (KJV)
- My little children, let us not love in word, neither in tongue; but in deed and in truth.
- World English Bible (WEB)
- My little children, let’s not love in word only, or with the tongue only, but in deed and truth.
- American Standard Version (ASV)
- [My] little children, let us not love in word, neither with the tongue; but in deed and truth.
- Bible in Basic English (BBE)
- My little children, do not let our love be in word and in tongue, but let it be in act and in good faith.
- Darby Translation (DBY)
- Children, let us not love with word, nor with tongue, but in deed and in truth.
- Webster's Bible (WBS)
- My little children, let us not love in word, neither in tongue, but in deed and in truth.
- Young's Literal Translation (YLT)
- My little children, may we not love in word nor in tongue, but in word and in truth!
Read in context
- 16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- 17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- 18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- 19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- 20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
Cross references
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 1 Corinthians 13:4–7 1 ಕೊರಿಂಥದವರಿಗೆ 13:4–7ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Ephesians 4:1–3 ಎಫೆಸದವರಿಗೆ 4:1–3ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
- Matthew 25:41–45 ಮತ್ತಾಯನು 25:41–45ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Ephesians 4:15 ಎಫೆಸದವರಿಗೆ 4:15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- 2 John 1:1–15 2 ಯೋಹಾನನು 1:1–15ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ. ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ. ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು. ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ. ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್. ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.