1 Kings · chapter 1 · verse 7
1 Kings 1:7 in Kannada
ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
Abshaalomana taru vaaya avana taayi avanannu hettalu. Avanu cherooyala maganaada yovaabana sangadaloo yaajakanaada ebyaataarana sangadaloo maatanaa didanu; avaru adoneeyanannu himbaalisi avanige sahaayakaraagiddaru.
1 Kings 1:7 in English
- King James Version (KJV)
- And he conferred with Joab the son of Zeruiah, and with Abiathar the priest: and they following Adonijah helped [him].
- World English Bible (WEB)
- He conferred with Joab the son of Zeruiah and with Abiathar the priest; and they followed Adonijah and helped him.
- American Standard Version (ASV)
- And he conferred with Joab the son of Zeruiah, and with Abiathar the priest: and they following Adonijah helped him.
- Bible in Basic English (BBE)
- And he had talk with Joab, the son of Zeruiah, and with Abiathar the priest; and they were on his side and gave him their support.
- Darby Translation (DBY)
- And he conferred with Joab the son of Zeruiah, and with Abiathar the priest; and they helped Adonijah and followed [him].
- Webster's Bible (WBS)
- And he conferred with Joab the son of Zeruiah, and with Abiathar the priest: and they following Adonijah, helped [him] .
- Young's Literal Translation (YLT)
- And his words are with Joab son of Zeruiah, and with Abiathar the priest, and they help after Adonijah;
Read in context
- 5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
- 7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 9ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
Cross references
- 2 Samuel 20:25 2 ಸಮುವೇಲನು 20:25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 1 Kings 2:22 1 ಅರಸುಗಳು 2:22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- 2 Samuel 15:24–29 2 ಸಮುವೇಲನು 15:24–29ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು. ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು. ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ. ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು. ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
- 1 Kings 2:26–35 1 ಅರಸುಗಳು 2:26–35ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು. ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು. ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 1 Chronicles 11:6 1 ಪೂರ್ವಕಾಲವೃತ್ತಾಂತ 11:6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 2 Samuel 15:35 2 ಸಮುವೇಲನು 15:35ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
- 1 Samuel 22:20–23 1 ಸಮುವೇಲನು 22:20–23ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- 2 Samuel 8:16 2 ಸಮುವೇಲನು 8:16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.