1 Kings · chapter 10 · verse 1
1 Kings 10:1 in Kannada
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
Shebada raaniyu kartana naamavannu kuritoo solomonana keerti yannoo kelidaaga ogatugalinda avanannu pareekshi salu bandalu.
1 Kings 10:1 in English
- King James Version (KJV)
- And when the queen of Sheba heard of the fame of Solomon concerning the name of the LORD, she came to prove him with hard questions.
- World English Bible (WEB)
- When the queen of Sheba heard of the fame of Solomon concerning the LORD’s name, she came to test him with hard questions.
- American Standard Version (ASV)
- And when the queen of Sheba heard of the fame of Solomon concerning the name of Jehovah, she came to prove him with hard questions.
- Bible in Basic English (BBE)
- Now the queen of Sheba, hearing great things of Solomon, came to put his wisdom to the test with hard questions.
- Darby Translation (DBY)
- And the queen of Sheba heard of the fame of Solomon in connection with the name of Jehovah, and came to prove him with enigmas.
- Webster's Bible (WBS)
- And when the queen of Sheba heard of the fame of Solomon concerning the name of the LORD, she came to prove him with hard questions.
- Young's Literal Translation (YLT)
- And the queen of Sheba is hearing of the fame of Solomon concerning the name of Jehovah, and cometh to try him with enigmas,
Read in context
- 1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- 2ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
- 3ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
Cross references
- Matthew 12:42 ಮತ್ತಾಯನು 12:42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Luke 11:31 ಲೂಕನು 11:31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
- Genesis 10:28 ಆದಿಕಾಂಡ 10:28ಓಬಾಲನೂ ಅಬೀಮಯೇಲನೂ ಶೆಬನೂ
- 2 Chronicles 9:1–12 2 ಪೂರ್ವಕಾಲವೃತ್ತಾಂತ 9:1–12ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು. ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ. ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು. ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ. ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು. ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು. ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ. ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು. ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ. ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
- Psalm 72:15 ಕೀರ್ತನೆಗಳು 72:15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
- Genesis 10:7 ಆದಿಕಾಂಡ 10:7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- Isaiah 60:6 ಯೆಶಾಯ 60:6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
- 1 Kings 4:34 1 ಅರಸುಗಳು 4:34ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- Psalm 49:4 ಕೀರ್ತನೆಗಳು 49:4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- 1 Kings 4:31 1 ಅರಸುಗಳು 4:31ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
- Ezekiel 27:22–23 ಯೆಹೆಜ್ಕೇಲನು 27:22–23ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.