1 Kings · chapter 11 · verse 10
1 Kings 11:10 in Kannada
ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
Anya devarugala hinde hogabaaradendu aatanu idannu kuritu avanige aajnyaapisiddanu. Aadare kartanu aajnyaapisi ddannu avanu kaikollade hodanu.
1 Kings 11:10 in English
- King James Version (KJV)
- And had commanded him concerning this thing, that he should not go after other gods: but he kept not that which the LORD commanded.
- World English Bible (WEB)
- and had commanded him concerning this thing, that he should not go after other gods; but he didn’t keep that which the LORD commanded.
- American Standard Version (ASV)
- and had commanded him concerning this thing, that he should not go after other gods: but he kept not that which Jehovah commanded.
- Bible in Basic English (BBE)
- And had given him orders about this very thing, that he was not to go after other gods; but he did not keep the orders of the Lord.
- Darby Translation (DBY)
- and had commanded him concerning this thing, not to go after other gods; but he kept not what Jehovah had commanded.
- Webster's Bible (WBS)
- And had commanded him concerning this thing, that he should not go after other gods: but he kept not that which the LORD commanded.
- Young's Literal Translation (YLT)
- and given a charge unto him concerning this thing, not to go after other gods; and he hath not kept that which Jehovah commanded,
Read in context
- 8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- 9ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
- 10ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
- 11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
- 12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
Cross references
- 1 Kings 6:12–13 1 ಅರಸುಗಳು 6:12–13ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ, ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- 1 Kings 9:4–7 1 ಅರಸುಗಳು 9:4–7ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು. ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- 2 Chronicles 7:17–22 2 ಪೂರ್ವಕಾಲವೃತ್ತಾಂತ 7:17–22ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ. ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು. ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು. ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.