1 Kings · chapter 11 · verse 12
1 Kings 11:12 in Kannada
ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
Aadare ninna tandeyaada daaveedanigoskara ninna kaala dalli naanu idannu maadade ninna magana kaiyolaginda adannu kasakolluvenu.
1 Kings 11:12 in English
- King James Version (KJV)
- Notwithstanding in thy days I will not do it for David thy father’s sake: [but] I will rend it out of the hand of thy son.
- World English Bible (WEB)
- Nevertheless, I will not do it in your days, for David your father’s sake; but I will tear it out of your son’s hand.
- American Standard Version (ASV)
- Notwithstanding in thy days I will not do it, for David thy father’s sake: but I will rend it out of the hand of thy son.
- Bible in Basic English (BBE)
- I will not do it in your life-time, because of your father David, but I will take it from your son.
- Darby Translation (DBY)
- notwithstanding in thy days I will not do it, for David thy father's sake; I will rend it out of the hand of thy son;
- Webster's Bible (WBS)
- Notwithstanding, in thy days, I will not do it, for David thy father's sake: [but] I will rend it out of the hand of thy son.
- Young's Literal Translation (YLT)
- 'Only, in thy days I do it not, for the sake of David thy father; out of the hand of thy son I rend it;
Read in context
- 10ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
- 11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
- 12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
- 13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
Cross references
- 2 Kings 20:19 2 ಅರಸುಗಳು 20:19ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- 1 Kings 21:29 1 ಅರಸುಗಳು 21:29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- 2 Kings 20:17 2 ಅರಸುಗಳು 20:17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- 2 Kings 22:19–20 2 ಅರಸುಗಳು 22:19–20ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- 1 Samuel 9:4–5 1 ಸಮುವೇಲನು 9:4–5ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು. ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.