1 Kings · chapter 11 · verse 23
1 Kings 11:23 in Kannada
ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
Idallade devaru mattobba shatruvannu avana mele ebbisidanu. Avanu yaarandare chobada arasanaada tanna yajamaananaagiruva hadadejara nannu bittu odihoda elyadaavana maganaada rejonanu.
1 Kings 11:23 in English
- King James Version (KJV)
- And God stirred him up [another] adversary, Rezon the son of Eliadah, which fled from his lord Hadadezer king of Zobah:
- World English Bible (WEB)
- God raised up an adversary to him, Rezon the son of Eliada, who had fled from his lord, Hadadezer king of Zobah.
- American Standard Version (ASV)
- And God raised up [another] adversary unto him, Rezon the son of Eliada, who had fled from his lord Hadadezer king of Zobah.
- Bible in Basic English (BBE)
- And God sent another trouble-maker, Rezon, the son of Eliada, who had gone in flight from his lord, Hadadezer, king of Zobah:
- Darby Translation (DBY)
- God stirred him up yet an adversary, Rezon the son of Eliada, who had fled from Hadadezer king of Zobah, his lord.
- Webster's Bible (WBS)
- And God stirred him up [another] adversary, Rezon the son of Eliadah, who fled from his lord Hadadezer king of Zobah:
- Young's Literal Translation (YLT)
- And God raiseth to him an adversary, Rezon son of Eliadah, who hath fled from Hadadezer king of Zobah, his lord,
Read in context
- 21ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
- 22ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
- 23ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
- 24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- 25ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್ ದೇಶವನ್ನು ಆಳುತ್ತಾ ಇದ್ದನು.
Cross references
- 1 Kings 11:14 1 ಅರಸುಗಳು 11:14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- Isaiah 45:5 ಯೆಶಾಯ 45:5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- Ezra 1:1 ಎಜ್ರನು 1:1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
- 2 Samuel 16:11 2 ಸಮುವೇಲನು 16:11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- 1 Chronicles 18:3–9 1 ಪೂರ್ವಕಾಲವೃತ್ತಾಂತ 18:3–9ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು. ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು. ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು. ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು. ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು. ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 1 Chronicles 19:16–19 1 ಪೂರ್ವಕಾಲವೃತ್ತಾಂತ 19:16–19ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು. ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು. ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- 2 Samuel 10:15–18 2 ಸಮುವೇಲನು 10:15–18ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.