1 Kings · chapter 11 · verse 9
1 Kings 11:9 in Kannada
ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
Aadakaarana solomonanige eradu saari pratyakshanaada israayelina devaraada kartana kadeyinda avana hrudayavu tirugihodadarinda kartanu avana mele kopisikondiddanu.
1 Kings 11:9 in English
- King James Version (KJV)
- And the LORD was angry with Solomon, because his heart was turned from the LORD God of Israel, which had appeared unto him twice,
- World English Bible (WEB)
- The LORD was angry with Solomon, because his heart was turned away from the LORD, the God of Israel, who had appeared to him twice,
- American Standard Version (ASV)
- And Jehovah was angry with Solomon, because his heart was turned away from Jehovah, the God of Israel, who had appeared unto him twice,
- Bible in Basic English (BBE)
- And the Lord was angry with Solomon, because his heart was turned away from the Lord, the God of Israel, who had twice come to him in a vision;
- Darby Translation (DBY)
- And Jehovah was angry with Solomon, because his heart was turned away from Jehovah the God of Israel, who had appeared to him twice,
- Webster's Bible (WBS)
- And the LORD was angry with Solomon, because his heart was turned from the LORD God of Israel, who had appeared to him twice,
- Young's Literal Translation (YLT)
- And Jehovah sheweth Himself angry with Solomon, for his heart hath turned aside from Jehovah, God of Israel, who had appeared unto him twice,
Read in context
- 7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- 8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- 9ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
- 10ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
- 11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
Cross references
- 1 Kings 9:2 1 ಅರಸುಗಳು 9:2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
- 1 Kings 3:5 1 ಅರಸುಗಳು 3:5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- Numbers 12:9 ಅರಣ್ಯಕಾಂಡ 12:9ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
- Deuteronomy 3:26 ಧರ್ಮೋಪದೇಶಕಾಂಡ 3:26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
- Exodus 4:14 ವಿಮೋಚನಕಾಂಡ 4:14ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
- Deuteronomy 9:8 ಧರ್ಮೋಪದೇಶಕಾಂಡ 9:8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
- Deuteronomy 7:4 ಧರ್ಮೋಪದೇಶಕಾಂಡ 7:4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- 2 Samuel 6:7 2 ಸಮುವೇಲನು 6:7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- Deuteronomy 9:20 ಧರ್ಮೋಪದೇಶಕಾಂಡ 9:20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- 1 Chronicles 21:7 1 ಪೂರ್ವಕಾಲವೃತ್ತಾಂತ 21:7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- 1 Kings 11:2–4 1 ಅರಸುಗಳು 11:2–4ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು. ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- Psalm 78:58–60 ಕೀರ್ತನೆಗಳು 78:58–60ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,