1 Kings · chapter 12 · verse 13
1 Kings 12:13 in Kannada
ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--
Aadare arasanu janarige kathinavaada pratyuttaravannu heli hiriyaru avanige helida aalochaneyannu bittu yuvakara aalochaneya prakaara avara sangada maatanaadi--
1 Kings 12:13 in English
- King James Version (KJV)
- And the king answered the people roughly, and forsook the old men’s counsel that they gave him;
- World English Bible (WEB)
- The king answered the people roughly, and abandoned the counsel of the old men which they had given him,
- American Standard Version (ASV)
- And the king answered the people roughly, and forsook the counsel of the old men which they had given him,
- Bible in Basic English (BBE)
- And the king gave them a rough answer, giving no attention to the suggestion of the old men;
- Darby Translation (DBY)
- And the king answered the people roughly, and forsook the advice of the old men which they had given him;
- Webster's Bible (WBS)
- And the king answered the people roughly, and forsook the old men's counsel that they gave him;
- Young's Literal Translation (YLT)
- And the king answereth the people sharply, and forsaketh the counsel of the elders which they counselled him,
Read in context
- 11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
- 12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
- 13ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--
- 14ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
- 15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
Cross references
- Proverbs 18:23 ಜ್ಞಾನೋಕ್ತಿಗಳು 18:23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Proverbs 10:11 ಜ್ಞಾನೋಕ್ತಿಗಳು 10:11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- Proverbs 10:32 ಜ್ಞಾನೋಕ್ತಿಗಳು 10:32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Kings 20:6–11 1 ಅರಸುಗಳು 20:6–11ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು. ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು. ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ-- ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು. ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- Exodus 10:28 ವಿಮೋಚನಕಾಂಡ 10:28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
- 1 Samuel 25:10–11 1 ಸಮುವೇಲನು 25:10–11ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 2 Samuel 19:43 2 ಸಮುವೇಲನು 19:43ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.