1 Kings · chapter 12 · verse 15
1 Kings 12:15 in Kannada
ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
Heegeye arasanu janara maatu kelade hodanu. Yaakandare kartanu nebaatana maga naada yerobbaamanige shilonyanaada aheeyana mukhaantaravaagi helida maatu eederuvadakke kaaranavu kartaninda untaayitu.
1 Kings 12:15 in English
- King James Version (KJV)
- Wherefore the king hearkened not unto the people; for the cause was from the LORD, that he might perform his saying, which the LORD spake by Ahijah the Shilonite unto Jeroboam the son of Nebat.
- World English Bible (WEB)
- So the king didn’t listen to the people; for it was a thing brought about from the LORD, that he might establish his word, which the LORD spoke by Ahijah the Shilonite to Jeroboam the son of Nebat.
- American Standard Version (ASV)
- So the king hearkened not unto the people; for it was a thing brought about of Jehovah, that he might establish his word, which Jehovah spake by Ahijah the Shilonite to Jeroboam the son of Nebat.
- Bible in Basic English (BBE)
- So the king did not give ear to the people; and this came about by the purpose of the Lord, so that what he had said by Ahijah the Shilonite to Jeroboam, son of Nebat, might be effected.
- Darby Translation (DBY)
- So the king hearkened not to the people; for it was brought about by Jehovah, that he might give effect to his word, which Jehovah spoke through Ahijah the Shilonite to Jeroboam the son of Nebat.
- Webster's Bible (WBS)
- Wherefore the king hearkened not to the people; for the cause was from the LORD, that he might perform his saying, which the LORD spoke by Ahijah the Shilonite to Jeroboam the son of Nebat.
- Young's Literal Translation (YLT)
- and the king hearkened not unto the people, for the revolution was from Jehovah, in order to establish His word that Jehovah spake by the hand of Ahijah the Shilonite unto Jeroboam son of Nebat.
Read in context
- 13ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--
- 14ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
- 15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
Cross references
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- 1 Kings 11:29–38 1 ಅರಸುಗಳು 11:29–38ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು. (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.) ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು. ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- Judges 14:4 ನ್ಯಾಯಸ್ಥಾಪಕರು 14:4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- 1 Kings 12:24 1 ಅರಸುಗಳು 12:24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
- 2 Chronicles 25:20 2 ಪೂರ್ವಕಾಲವೃತ್ತಾಂತ 25:20ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
- 2 Chronicles 22:7 2 ಪೂರ್ವಕಾಲವೃತ್ತಾಂತ 22:7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- 2 Chronicles 10:15 2 ಪೂರ್ವಕಾಲವೃತ್ತಾಂತ 10:15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
- 1 Kings 11:11 1 ಅರಸುಗಳು 11:11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
- John 19:32–37 ಯೋಹಾನನು 19:32–37ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು. ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು. ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು. ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು. ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
- 2 Kings 9:36 2 ಅರಸುಗಳು 9:36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
Original words (Hebrew)
- king · H4428מֶלֶךְ melek
- hearkened · H8085שָׁמַע shâmaʻ
- people · H5971עַם ʻam
- cause · H5438סִבָּה çibbâh
- perform · H6965קוּם qûwm
- saying · H1697דָּבָר dâbâr
- spake · H1696דָבַר dâbar
- by · H3027יָד yâd
- Ahijah · H281אֲחִיָּה ʼĂchîyâh
- Shilonite · H7888שִׁילוֹנִי Shîylôwnîy
- Jeroboam · H3379יָרׇבְעָם Yârobʻâm
- son · H1121בֵּן bên
- Nebat · H5028נְבָט Nᵉbâṭ