1 Kings 12:32 in Kannada
ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Yaarobbaamanu entane tingala hadi naidane divasadalli yehoodadalliruva habbada prakaara habbavannu nemisi peethada mele baliga lannu arpisidanu. Ee prakaara avanu beteli nalli maadi avanu untumaadida horigalige baligalannu arpisalu betelinalli taanu maadida unnata sthalagala yaajakaranne nemisidanu.heegeye avanu tanna svanta hrudayadalli yochisida tingalalli entane tingala hadinaidane divasadalli avanu betelinalli untumaadida peethada mele baligalannarpisi israayelina makkalige habbavannu nemisidanu. Idallade taane peethada mele baligalannarpisi dhoopavannu suttanu.
1 Kings 12:32 in English
- King James Version (KJV)
- And Jeroboam ordained a feast in the eighth month, on the fifteenth day of the month, like unto the feast that [is] in Judah, and he offered upon the altar. So did he in Beth-el, sacrificing unto the calves that he had made: and he placed in Beth-el the priests of the high places which he had made.
- World English Bible (WEB)
- Jeroboam ordained a feast in the eighth month, on the fifteenth day of the month, like the feast that is in Judah, and he went up to the altar. He did so in Bethel, sacrificing to the calves that he had made, and he placed in Bethel the priests of the high places that he had made.
- American Standard Version (ASV)
- And Jeroboam ordained a feast in the eighth month, on the fifteenth day of the month, like unto the feast that is in Judah, and he went up unto the altar; so did he in Beth-el, sacrificing unto the calves that he had made: and he placed in Beth-el the priests of the high places that he had made.
- Bible in Basic English (BBE)
- And Jeroboam gave orders for a feast in the eighth month, on the fifteenth day of the month, like the feast which is kept in Judah, and he went up to the altar. And in the same way, in Beth-el, he gave offerings to the oxen which he had made, placing in Beth-el the priests of the high places he had made.
- Darby Translation (DBY)
- And Jeroboam ordained a feast in the eighth month, on the fifteenth day of the month, like the feast that was in Judah, and he offered upon the altar. So did he in Bethel, sacrificing to the calves that he had made; and he placed in Bethel the priests of the high places that he had made.
- Webster's Bible (WBS)
- And Jeroboam ordained a feast in the eighth month, on the fifteenth day of the month, like the feast that [is] in Judah, and he offered upon the altar. So did he in Beth-el, sacrificing to the calves that he had made: and he placed in Beth-el the priests of the high places which he had made.
- Young's Literal Translation (YLT)
- and Jeroboam maketh a festival in the eighth month, in the fifteenth day of the month, like the festival that [is] in Judah, and he offereth on the altar — so did he in Beth-El — to sacrifice to the calves which he made, and he hath appointed in Beth-El the priests of the high places that he made.
Read in context
- 30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- 31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- 32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 33ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Cross references
- Numbers 29:12–40 ಅರಣ್ಯಕಾಂಡ 29:12–40ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು. ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- 1 Kings 8:5 1 ಅರಸುಗಳು 8:5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
- Amos 7:10–13 ಆಮೋಸ 7:10–13ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- 1 Kings 8:2 1 ಅರಸುಗಳು 8:2ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
- Matthew 15:8–9 ಮತ್ತಾಯನು 15:8–9ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Leviticus 23:33–44 ಯಾಜಕಕಾಂಡ 23:33–44ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ezekiel 43:8 ಯೆಹೆಜ್ಕೇಲನು 43:8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
Original words (Hebrew)
- Jeroboam · H3379יָרׇבְעָם Yârobʻâm
- ordained · H6213עָשָׂה ʻâsâh
- feast · H2282חַג chag
- eighth · H8066שְׁמִינִי shᵉmîynîy
- month · H2320חֹדֶשׁ chôdesh
- fifteenth · H2568חָמֵשׁ châmêsh
- day · H3117יוֹם yôwm
- month · H2320חֹדֶשׁ chôdesh
- feast · H2282חַג chag
- Judah · H3063יְהוּדָה Yᵉhûwdâh
- offered · H5927עָלָה ʻâlâh
- altar · H4196מִזְבֵּחַ mizbêach
- did · H6213עָשָׂה ʻâsâh
- Beth-el · H1008בֵּית־אֵל Bêyth-ʼÊl
- sacrificing · H2076זָבַח zâbach
- calves · H5695עֵגֶל ʻêgel
- made · H6213עָשָׂה ʻâsâh
- placed · H5975עָמַד ʻâmad
- Beth-el · H1008בֵּית־אֵל Bêyth-ʼÊl
- priests · H3548כֹּהֵן kôhên
- places · H1116בָּמָה bâmâh
- made · H6213עָשָׂה ʻâsâh