1 Kings · chapter 14 · verse 19
1 Kings 14:19 in Kannada
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
Yaarobbaamana mikkaada kriyegaloo avanu yuddha maadiddoo aaliddoo--igo, ivu israayelyara arasugala vrutaantagala pustaka dalli bareyalpattive.
1 Kings 14:19 in English
- King James Version (KJV)
- And the rest of the acts of Jeroboam, how he warred, and how he reigned, behold, they [are] written in the book of the chronicles of the kings of Israel.
- World English Bible (WEB)
- The rest of the acts of Jeroboam, how he fought and how he reigned, behold, they are written in the book of the chronicles of the kings of Israel.
- American Standard Version (ASV)
- And the rest of the acts of Jeroboam, how he warred, and how he reigned, behold, they are written in the book of the chronicles of the kings of Israel.
- Bible in Basic English (BBE)
- Now the rest of the acts of Jeroboam, how he made war and how he became king, are recorded in the book of the history of the kings of Israel.
- Darby Translation (DBY)
- And the rest of the acts of Jeroboam, how he warred, and how he reigned, behold, they are written in the book of the chronicles of the kings of Israel.
- Webster's Bible (WBS)
- And the rest of the acts of Jeroboam, how he warred, and how he reigned, behold, they [are] written in the book of the chronicles of the kings of Israel.
- Young's Literal Translation (YLT)
- And the rest of the matters of Jeroboam, how he fought, and how he reigned, lo, they are written on the book of the Chronicles of the kings of Israel.
Read in context
- 17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
- 18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
- 19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
- 21ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
Cross references
- 2 Chronicles 13:2–20 2 ಪೂರ್ವಕಾಲವೃತ್ತಾಂತ 13:2–20ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು. ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು. ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ. ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ? ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ. ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ. ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು. ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು. ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ. ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು. ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು. ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು. ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು. ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು. ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು. ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 1 Kings 16:20 1 ಅರಸುಗಳು 16:20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 16:14 1 ಅರಸುಗಳು 16:14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 16:5 1 ಅರಸುಗಳು 16:5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 1 Chronicles 27:24 1 ಪೂರ್ವಕಾಲವೃತ್ತಾಂತ 27:24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- 1 Kings 22:39 1 ಅರಸುಗಳು 22:39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 15:31 1 ಅರಸುಗಳು 15:31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 14:29–30 1 ಅರಸುಗಳು 14:29–30ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 1 Kings 16:27 1 ಅರಸುಗಳು 16:27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?