1 Kings · chapter 17 · verse 4
1 Kings 17:4 in Kannada
ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
Neenu aa hallada neerannu kudiyuvi; ninage aahaaravannu tandu kodalu naanu kaagegalige aajnyaapisiddene endu helidanu.
1 Kings 17:4 in English
- King James Version (KJV)
- And it shall be, [that] thou shalt drink of the brook; and I have commanded the ravens to feed thee there.
- World English Bible (WEB)
- You shall drink from the brook. I have commanded the ravens to feed you there.”
- American Standard Version (ASV)
- And it shall be, that thou shalt drink of the brook; and I have commanded the ravens to feed thee there.
- Bible in Basic English (BBE)
- The water of the stream will be your drink, and by my orders the ravens will give you food there.
- Darby Translation (DBY)
- And it shall be, that thou shalt drink of the torrent; and I have commanded the ravens to feed thee there.
- Webster's Bible (WBS)
- And it shall be, [that] thou shalt drink of the brook; and I have commanded the ravens to feed thee there.
- Young's Literal Translation (YLT)
- and it hath been, from the brook thou dost drink, and the ravens I have commanded to sustain thee there.'
Read in context
- 2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
- 3ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
- 4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- 5ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.
- 6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
Cross references
- 1 Kings 17:9 1 ಅರಸುಗಳು 17:9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Job 38:41 ಯೋಬನು 38:41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- 1 Kings 19:5–8 1 ಅರಸುಗಳು 19:5–8ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು. ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು. ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು. ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Matthew 4:4 ಮತ್ತಾಯನು 4:4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- Psalm 33:8–9 ಕೀರ್ತನೆಗಳು 33:8–9ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ. ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Job 38:8–13 ಯೋಬನು 38:8–13ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು. ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Matthew 4:11 ಮತ್ತಾಯನು 4:11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- Amos 9:3–4 ಆಮೋಸ 9:3–4ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Numbers 20:8 ಅರಣ್ಯಕಾಂಡ 20:8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.