1 Kings · chapter 18 · verse 1
1 Kings 18:1 in Kannada
ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
Aneka divasagalu hoda taruvaaya moorane varushadalli enaayitandare, kartana vaakyavu eleeyanige untaagi--neenu hogi ahaabanige ninnannu torisiko. Aaga naanu bhoomiya mele maleyannu kaluhisuvenu andanu.
1 Kings 18:1 in English
- King James Version (KJV)
- And it came to pass [after] many days, that the word of the LORD came to Elijah in the third year, saying, Go, shew thyself unto Ahab; and I will send rain upon the earth.
- World English Bible (WEB)
- After many days, the LORD’s word came to Elijah, in the third year, saying, “Go, show yourself to Ahab; and I will send rain on the earth.”
- American Standard Version (ASV)
- And it came to pass after many days, that the word of Jehovah came to Elijah, in the third year, saying, Go, show thyself unto Ahab; and I will send rain upon the earth.
- Bible in Basic English (BBE)
- Now after a long time, the word of the Lord came to Elijah, in the third year, saying, Go and let Ahab see you, so that I may send rain on the earth.
- Darby Translation (DBY)
- And it came to pass after many days, that the word of Jehovah came to Elijah in the third year, saying, Go, shew thyself to Ahab; and I will send rain upon the face of the earth.
- Webster's Bible (WBS)
- And it came to pass [after] many days, that the word of the LORD came to Elijah in the third year, saying, Go, show thyself to Ahab; and I will send rain upon the earth.
- Young's Literal Translation (YLT)
- And the days are many, and the word of Jehovah hath been unto Elijah in the third year, saying, 'Go, appear unto Ahab, and I give rain on the face of the ground;'
Read in context
- 1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- 2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- 3ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
Cross references
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- 1 Kings 18:15–40 1 ಅರಸುಗಳು 18:15–40ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು. ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು. ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ. ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು. ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು. ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ. ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ. ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು. ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು. ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು. ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು. ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು. ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು. ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ. ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು. ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು. ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು. ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು. ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು. ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- 1 Kings 18:2 1 ಅರಸುಗಳು 18:2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- Amos 4:7 ಆಮೋಸ 4:7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- 1 Kings 17:7 1 ಅರಸುಗಳು 17:7ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Jeremiah 10:13 ಯೆರೆಮೀಯ 10:13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
Original words (Hebrew)
- many · H7227רַב rab
- days · H3117יוֹם yôwm
- word · H1697דָּבָר dâbâr
- Elijah · H452אֵלִיָּה ʼÊlîyâh
- third · H7992שְׁלִישִׁי shᵉlîyshîy
- year · H8141שָׁנֶה shâneh
- saying · H559אָמַר ʼâmar
- Go · H3212יָלַךְ yâlak
- shew · H7200רָאָה râʼâh
- Ahab · H256אַחְאָב ʼAchʼâb
- send · H5414נָתַן nâthan
- rain · H4306מָטַר mâṭar
- upon · H6440פָּנִים pânîym
- earth · H127אֲדָמָה ʼădâmâh