1 Kings · chapter 18 · verse 37
1 Kings 18:37 in Kannada
ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
Neenu devaraada kartanendoo neenu avara hrudayavannu marali tirigisutti endoo ee janavu tiliyuva haage nanage uttarakodu, o kartane, nanage uttarakodu endu bedidanu.
1 Kings 18:37 in English
- King James Version (KJV)
- Hear me, O LORD, hear me, that this people may know that thou [art] the LORD God, and [that] thou hast turned their heart back again.
- World English Bible (WEB)
- Hear me, LORD, hear me, that this people may know that you, LORD, are God, and that you have turned their heart back again.”
- American Standard Version (ASV)
- Hear me, O Jehovah, hear me, that this people may know that thou, Jehovah, art God, and [that] thou hast turned their heart back again.
- Bible in Basic English (BBE)
- Give me an answer, O Lord, give me an answer, so that this people may see that you are God, and that you have made their hearts come back again.
- Darby Translation (DBY)
- Answer me, Jehovah, answer me, that this people may know that thou Jehovah art God, and [that] thou hast turned their heart back again.
- Webster's Bible (WBS)
- Hear me, O LORD, hear me, that this people may know that thou [art] the LORD God, and [that] thou hast turned their heart back again.
- Young's Literal Translation (YLT)
- answer me, O Jehovah, answer me, and this people doth know that Thou [art] Jehovah God; and Thou hast turned their heart backward.'
Read in context
- 35ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
- 36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- 37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
- 38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- 39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
Cross references
- Daniel 9:17–19 ದಾನಿಯೇಲನು 9:17–19ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Luke 1:16–17 ಲೂಕನು 1:16–17ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- 1 Kings 18:24 1 ಅರಸುಗಳು 18:24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- 1 Kings 18:36 1 ಅರಸುಗಳು 18:36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- Isaiah 37:17–20 ಯೆಶಾಯ 37:17–20ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 2 Chronicles 32:19–20 2 ಪೂರ್ವಕಾಲವೃತ್ತಾಂತ 32:19–20ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು. ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
- Luke 11:8 ಲೂಕನು 11:8ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Genesis 32:24 ಆದಿಕಾಂಡ 32:24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.