1 Kings · chapter 19 · verse 15
1 Kings 19:15 in Kannada
ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
Aaga kartanu avanige--neenu hogi ninna maargadalli damaskada aranyakke tirigikondu olage hogi hajaayelanannu araamina mele arasanaagiralu abhishekisu. Idallade ninshiyana maganaada yehuvannu israayelina mele arasanaagiralu abhishekisi, abelmehola oorinavanaada shaaphaatana maganaagiruva eleesha nannu ninage badalaagi pravaadiyaagiralu abhi shekisu.
1 Kings 19:15 in English
- King James Version (KJV)
- And the LORD said unto him, Go, return on thy way to the wilderness of Damascus: and when thou comest, anoint Hazael [to be] king over Syria:
- World English Bible (WEB)
- The LORD said to him, “Go, return on your way to the wilderness of Damascus. When you arrive, anoint Hazael to be king over Syria.
- American Standard Version (ASV)
- And Jehovah said unto him, Go, return on thy way to the wilderness of Damascus: and when thou comest, thou shalt anoint Hazael to be king over Syria;
- Bible in Basic English (BBE)
- And the Lord said to him, Go back on your way through the waste land to Damascus; and when you come there, put the holy oil on Hazael to make him king over Aram;
- Darby Translation (DBY)
- And Jehovah said to him, Go, return on thy way to the wilderness of Damascus; and when thou comest, anoint Hazael king over Syria;
- Webster's Bible (WBS)
- And the LORD said to him, Go, return on thy way to the wilderness of Damascus: and when thou comest, anoint Hazael [to be] king over Syria:
- Young's Literal Translation (YLT)
- And Jehovah saith unto him, 'Go turn back on thy way to the wilderness of Damascus, and thou hast gone in, and anointed Hazael for king over Aram,
Read in context
- 13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- 14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- 15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
- 16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
Cross references
- Isaiah 45:1 ಯೆಶಾಯ 45:1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 2 Kings 8:7–15 2 ಅರಸುಗಳು 8:7–15ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು. ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು. ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು. ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು. ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು. ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ, ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- Amos 1:4 ಆಮೋಸ 1:4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
- 2 Kings 9:14 2 ಅರಸುಗಳು 9:14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
- Jeremiah 27:2–22 ಯೆರೆಮೀಯ 27:2–22ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು. ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ? ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು? ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ-- ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- 2 Kings 8:28 2 ಅರಸುಗಳು 8:28ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- Acts 9:2–3 ಅಪೊಸ್ತಲರ ಕೃತ್ಯಗಳು 9:2–3ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.