1 Kings · chapter 2 · verse 1
1 Kings 2:1 in Kannada
ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
Daaveedana saayuva kaalavu saviాpisiddarinda avanu tanna maganaada solomonanige aajnyaapisiddenandare
1 Kings 2:1 in English
- King James Version (KJV)
- Now the days of David drew nigh that he should die; and he charged Solomon his son, saying,
- World English Bible (WEB)
- Now the days of David came near that he should die; and he commanded Solomon his son, saying,
- American Standard Version (ASV)
- Now the days of David drew nigh that he should die; and he charged Solomon his son, saying,
- Bible in Basic English (BBE)
- Now the time of David's death came near; and he gave orders to Solomon his son, saying,
- Darby Translation (DBY)
- And the days of David were at hand that he should die; and he enjoined Solomon his son saying,
- Webster's Bible (WBS)
- Now the days of David drew nigh that he should die; and he charged Solomon his son, saying,
- Young's Literal Translation (YLT)
- And draw near do the days of David to die, and he chargeth Solomon his son, saying,
Read in context
- 1ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
- 2ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
- 3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
Cross references
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- 2 Peter 1:13–15 2 ಪೇತ್ರನು 1:13–15ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Acts 20:28–31 ಅಪೊಸ್ತಲರ ಕೃತ್ಯಗಳು 20:28–31ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Numbers 27:19 ಅರಣ್ಯಕಾಂಡ 27:19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--