1 Kings · chapter 2 · verse 25
1 Kings 2:25 in Kannada
ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
Arasanaada solomonanu yehoyaadaavana maganaada benaayanannu kaluhisidanu. Ivanu avana mele bidaddarinda avanu sattuhodanu.
1 Kings 2:25 in English
- King James Version (KJV)
- And king Solomon sent by the hand of Benaiah the son of Jehoiada; and he fell upon him that he died.
- World English Bible (WEB)
- King Solomon sent Benaiah the son of Jehoiada; and he fell on him, so that he died.
- American Standard Version (ASV)
- And king Solomon sent by Benaiah the son of Jehoiada; and he fell upon him, so that he died.
- Bible in Basic English (BBE)
- And King Solomon sent Benaiah, the son of Jehoiada, and he made an attack on him and put him to death.
- Darby Translation (DBY)
- And king Solomon sent by the hand of Benaiah the son of Jehoiada; who fell on him, that he died.
- Webster's Bible (WBS)
- And king Solomon sent by the hand of Benaiah the son of Jehoiada; and he fell upon him that he died.
- Young's Literal Translation (YLT)
- And king Solomon sendeth by the hand of Benaiah son of Jehoiada, and he falleth upon him, and he dieth.
Read in context
- 23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
- 24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- 25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- 27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
Cross references
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Samuel 15:33 1 ಸಮುವೇಲನು 15:33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- 2 Samuel 4:12 2 ಸಮುವೇಲನು 4:12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 2 Samuel 1:15 2 ಸಮುವೇಲನು 1:15ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
- 1 Kings 2:34 1 ಅರಸುಗಳು 2:34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- Judges 8:20–21 ನ್ಯಾಯಸ್ಥಾಪಕರು 8:20–21ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು. ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
- 1 Kings 2:31 1 ಅರಸುಗಳು 2:31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.