1 Kings · chapter 2 · verse 33
1 Kings 2:33 in Kannada
ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
Aadadarinda avara raktaaparaadhavu yovaabana taleya mele yoo avana santatiyavara taleya meleyoo yugayugakkoo iruvadu. Aadare daaveedana meleyoo avana santaanadavara meleyoo maneya meleyoo sinhaasanada meleyoo kartaninda samaadhaanavu yugayugaantarakkoo iruvadu andanu.
1 Kings 2:33 in English
- King James Version (KJV)
- Their blood shall therefore return upon the head of Joab, and upon the head of his seed for ever: but upon David, and upon his seed, and upon his house, and upon his throne, shall there be peace for ever from the LORD.
- World English Bible (WEB)
- So their blood will return on the head of Joab and on the head of his offspring forever. But for David, for his offspring, for his house, and for his throne, there will be peace forever from the LORD.”
- American Standard Version (ASV)
- So shall their blood return upon the head of Joab, and upon the head of his seed for ever: but unto David, and unto his seed, and unto his house, and unto his throne, shall there be peace for ever from Jehovah.
- Bible in Basic English (BBE)
- So their blood will be on the head of Joab, and on the head of his seed for ever; but for David and his seed and his family and the seat of his kingdom, there will be peace for ever from the Lord.
- Darby Translation (DBY)
- And their blood shall be requited upon the head of Joab, and upon the head of his seed for ever; but upon David, and upon his seed, and upon his house, and upon his throne, shall there be peace for ever from Jehovah.
- Webster's Bible (WBS)
- Their blood shall therefore return upon the head of Joab, and upon the head of his seed for ever: but upon David, and upon his seed, and upon his house, and upon his throne, shall there be peace forever from the LORD.
- Young's Literal Translation (YLT)
- yea, turned back hath their blood on the head of Joab, and on the head of his seed to the age; and for David, and for his seed, and for his house, and for his throne, there is peace unto the age, from Jehovah.'
Read in context
- 31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- 32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- 34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
Cross references
- Proverbs 25:5 ಜ್ಞಾನೋಕ್ತಿಗಳು 25:5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- 1 Kings 2:32 1 ಅರಸುಗಳು 2:32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 2 Samuel 3:28–29 2 ಸಮುವೇಲನು 3:28–29ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ. ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Psalm 101:8 ಕೀರ್ತನೆಗಳು 101:8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Isaiah 11:1–9 ಯೆಶಾಯ 11:1–9ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ. ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 109:6–15 ಕೀರ್ತನೆಗಳು 109:6–15ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
Original words (Hebrew)
- blood · H1818דָּם dâm
- return · H7725שׁוּב shûwb
- head · H7218רֹאשׁ rôʼsh
- Joab · H3097יוֹאָב Yôwʼâb
- head · H7218רֹאשׁ rôʼsh
- seed · H2233זֶרַע zeraʻ
- ever · H5769עוֹלָם ʻôwlâm
- David · H1732דָּוִד Dâvid
- seed · H2233זֶרַע zeraʻ
- house · H1004בַּיִת bayith
- throne · H3678כִּסֵּא kiççêʼ
- peace · H7965שָׁלוֹם shâlôwm
- for · H5704עַד ʻad
- ever · H5769עוֹלָם ʻôwlâm