1 Kings · chapter 2 · verse 6
1 Kings 2:6 in Kannada
ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
Aadakaarana neenu ninna jnyaanada prakaara maadi avana nare taleyannu samaadhaanadinda samaadhige iliyagodisadiru.
1 Kings 2:6 in English
- King James Version (KJV)
- Do therefore according to thy wisdom, and let not his hoar head go down to the grave in peace.
- World English Bible (WEB)
- Do therefore according to your wisdom, and don’t let his gray head go down to Sheol in peace.
- American Standard Version (ASV)
- Do therefore according to thy wisdom, and let not his hoar head go down to Sheol in peace.
- Bible in Basic English (BBE)
- So be guided by your wisdom, and let not his white head go down to the underworld in peace.
- Darby Translation (DBY)
- And thou shalt do according to thy wisdom, and not let his hoar head go down to Sheol in peace.
- Webster's Bible (WBS)
- Do therefore according to thy wisdom, and let not his hoary head go down to the grave in peace.
- Young's Literal Translation (YLT)
- and thou hast done according to thy wisdom, and dost not let his old age go down in peace to Sheol.
Read in context
- 4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
- 6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
- 7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- 8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
Cross references
- 1 Kings 2:9 1 ಅರಸುಗಳು 2:9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- Isaiah 48:22 ಯೆಶಾಯ 48:22ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Proverbs 28:17 ಜ್ಞಾನೋಕ್ತಿಗಳು 28:17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- 1 Kings 2:28–34 1 ಅರಸುಗಳು 2:28–34ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Isaiah 57:2 ಯೆಶಾಯ 57:2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Isaiah 65:20 ಯೆಶಾಯ 65:20ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.