1 Kings · chapter 20 · verse 32
1 Kings 20:32 in Kannada
ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
Haageye avaru goniyannu tamma naduvugalalli kattikondu haggagalannu tamma tale galige suttikondu israayelina arasana balige bandu--nanna praana badukalendu ninna sevakanaada benhadadanu heluttaane andaru. Adakke avanuavanu innoo badukiruttaano? Avanu nanna sahodaranu andanu.
1 Kings 20:32 in English
- King James Version (KJV)
- So they girded sackcloth on their loins, and [put] ropes on their heads, and came to the king of Israel, and said, Thy servant Ben-hadad saith, I pray thee, let me live. And he said, [Is] he yet alive? he [is] my brother.
- World English Bible (WEB)
- So they put sackcloth on their bodies and ropes on their heads, and came to the king of Israel, and said, “Your servant Ben Hadad says, ‘Please let me live.’” He said, “Is he still alive? He is my brother.”
- American Standard Version (ASV)
- So they girded sackcloth on their loins, and [put] ropes on their heads, and came to the king of Israel, and said, Thy servant Ben-hadad saith, I pray thee, let me live. And he said, Is he yet alive? he is my brother.
- Bible in Basic English (BBE)
- So they put on haircloth, and cords on their heads, and came to the king of Israel and said, Your servant Ben-hadad says, Let me now keep my life. And he said, Is he still living? he is my brother.
- Darby Translation (DBY)
- And they girded sackcloth on their loins, and ropes on their heads, and came to the king of Israel, and said, Thy servant Ben-Hadad says, I pray thee, let me live. And he said, Is he yet alive? he is my brother.
- Webster's Bible (WBS)
- So they girded sackcloth on their loins, and [put] ropes on their heads, and came to the king of Israel, and said, Thy servant Ben-hadad saith, I pray thee, let me live. And he said, [Is] he yet alive? he [is] my brother.
- Young's Literal Translation (YLT)
- And they gird sackcloth on their loins, and ropes [are] on their heads, and they come in unto the king of Israel, and say, 'Thy servant Ben-Hadad hath said, Let me live, I pray thee;' and he saith, 'Is he yet alive? he [is] my brother.'
Read in context
- 30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
- 32ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
- 33ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
- 34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
Cross references
- 1 Kings 20:3–6 1 ಅರಸುಗಳು 20:3–6ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು. ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು. ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು. ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Job 12:17–18 ಯೋಬನು 12:17–18ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- 1 Samuel 15:8–20 1 ಸಮುವೇಲನು 15:8–20ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು. ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು. ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು. ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು. ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು. ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು. ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು. ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Daniel 5:20–23 ದಾನಿಯೇಲನು 5:20–23ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- 1 Kings 20:31 1 ಅರಸುಗಳು 20:31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
Original words (Hebrew)
- girded · H2296חָגַר châgar
- sackcloth · H8242שַׂק saq
- loins · H4975מֹתֶן môthen
- ropes · H2256חֶבֶל chebel
- heads · H7218רֹאשׁ rôʼsh
- came · H935בּוֹא bôwʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- servant · H5650עֶבֶד ʻebed
- Ben-hadad · H1130בֶּן־הֲדַד Ben-Hădad
- saith · H559אָמַר ʼâmar
- live · H2421חָיָה châyâh
- said · H559אָמַר ʼâmar
- alive · H2416חַי chay
- brother · H251אָח ʼâch