1 Kings · chapter 22 · verse 12
1 Kings 22:12 in Kannada
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Samasta pravaadigaloo haageye pravaadisi--gilyaadina raamotige hogi saaphalya hondu; kartanu adannu arasana kaiyalli oppisikoduvanu andaru.
1 Kings 22:12 in English
- King James Version (KJV)
- And all the prophets prophesied so, saying, Go up to Ramoth-gilead, and prosper: for the LORD shall deliver [it] into the king’s hand.
- World English Bible (WEB)
- All the prophets prophesied so, saying, “Go up to Ramoth Gilead and prosper; for the LORD will deliver it into the hand of the king.”
- American Standard Version (ASV)
- And all the prophets prophesied so, saying, Go up to Ramoth-gilead, and prosper; for Jehovah will deliver it into the hand of the king.
- Bible in Basic English (BBE)
- And all the prophets said the same thing, saying, Go up to Ramoth-gilead, and it will go well for you, for the Lord will give it into the hands of the king.
- Darby Translation (DBY)
- And all the prophets prophesied so, saying, Go up to Ramoth-Gilead, and prosper; for Jehovah will give it into the king's hand.
- Webster's Bible (WBS)
- And all the prophets prophesied so, saying, Go up to Ramoth-gilead, and prosper: for the LORD will deliver [it] into the king's hand.
- Young's Literal Translation (YLT)
- and all the prophets are prophesying so, saying, 'Go up to Ramoth-Gilead, and prosper, and Jehovah hath given [it] into the hand of the king.'
Read in context
- 10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
- 11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
- 12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
Cross references
- 2 Chronicles 35:22 2 ಪೂರ್ವಕಾಲವೃತ್ತಾಂತ 35:22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
- 1 Kings 22:6–15 1 ಅರಸುಗಳು 22:6–15ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 1 Kings 22:32–36 1 ಅರಸುಗಳು 22:32–36ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು. ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು. ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.