1 Kings · chapter 5 · verse 3
1 Kings 5:3 in Kannada
ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
Nanna tandeyaada daaveedanu tanna devaraada kartana naamakke maneyannu kattisalaarade iddanendu neenu balle. Kartanu avana shatrugalannu avana paadada kelage haakuva varegoo avana suttaliruva samasta dikkugalalli yuddha untaagittu.
1 Kings 5:3 in English
- King James Version (KJV)
- Thou knowest how that David my father could not build an house unto the name of the LORD his God for the wars which were about him on every side, until the LORD put them under the soles of his feet.
- World English Bible (WEB)
- “You know that David my father could not build a house for the name of the LORD his God because of the wars which were around him on every side, until the LORD put his enemies under the soles of his feet.
- American Standard Version (ASV)
- Thou knowest how that David my father could not build a house for the name of Jehovah his God for the wars which were about him on every side, until Jehovah put them under the soles of his feet.
- Bible in Basic English (BBE)
- You have knowledge that David my father was not able to make a house for the name of the Lord his God, because of the wars which were round him on every side, till the Lord put all those who were against him under his feet.
- Darby Translation (DBY)
- Thou knowest that David my father could not build a house unto the name of Jehovah his God, because of the wars which were about him on every side, until Jehovah put them under the soles of his feet.
- Webster's Bible (WBS)
- Thou knowest how that David my father could not build a house to the name of the LORD his God, for the wars which were about him on every side, until the LORD put them under the soles of his feet.
- Young's Literal Translation (YLT)
- 'Thou hast known David my father, that he hath not been able to build a house to the name of Jehovah his God, because of the wars that have been round about him, till Jehovah's putting them under the soles of his feet.
Read in context
- 1ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
- 2ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
- 3ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
- 4ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
- 5ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
Cross references
- 1 Chronicles 28:3 1 ಪೂರ್ವಕಾಲವೃತ್ತಾಂತ 28:3ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
- 1 Chronicles 22:8 1 ಪೂರ್ವಕಾಲವೃತ್ತಾಂತ 22:8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Psalm 8:6 ಕೀರ್ತನೆಗಳು 8:6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- 1 Chronicles 22:4–6 1 ಪೂರ್ವಕಾಲವೃತ್ತಾಂತ 22:4–6ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು. ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
- Joshua 10:24 ಯೆಹೋಶುವ 10:24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
- 2 Samuel 7:5–11 2 ಸಮುವೇಲನು 7:5–11ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ? ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು. ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ? ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Chronicles 6:6–8 2 ಪೂರ್ವಕಾಲವೃತ್ತಾಂತ 6:6–8ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Original words (Hebrew)
- knowest · H3045יָדַע yâdaʻ
- David · H1732דָּוִד Dâvid
- father · H1אָב ʼâb
- could · H3201יָכֹל yâkôl
- build · H1129בָּנָה bânâh
- house · H1004בַּיִת bayith
- name · H8034שֵׁם shêm
- God · H430אֱלֹהִים ʼĕlôhîym
- for · H6440פָּנִים pânîym
- wars · H4421מִלְחָמָה milchâmâh
- side · H5437סָבַב çâbab
- put · H5414נָתַן nâthan
- soles · H3709כַּף kaph
- feet · H7272רֶגֶל regel