1 Kings · chapter 6 · verse 2
1 Kings 6:2 in Kannada
ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
Arasa naada solomonanu kartanigoskara mane yannu kattisiddu hegandare, adara udda aravattu molavoo agala ippattu molavoo ettara moovattu molavoo.
1 Kings 6:2 in English
- King James Version (KJV)
- And the house which king Solomon built for the LORD, the length thereof [was] threescore cubits, and the breadth thereof twenty [cubits], and the height thereof thirty cubits.
- World English Bible (WEB)
- The house which King Solomon built for the LORD had a length of sixty cubits, and its width twenty, and its height thirty cubits.
- American Standard Version (ASV)
- And the house which king Solomon built for Jehovah, the length thereof was threescore cubits, and the breadth thereof twenty [cubits], and the height thereof thirty cubits.
- Bible in Basic English (BBE)
- The house which Solomon made for the Lord was sixty cubits long, twenty cubits wide and thirty cubits high.
- Darby Translation (DBY)
- And the house that king Solomon built for Jehovah was sixty cubits in length, and twenty in breadth, and thirty cubits in height.
- Webster's Bible (WBS)
- And the house which king Solomon built for the LORD, the length of it [was] sixty cubits, and the breadth of it twenty [cubits] , and the hight of it thirty cubits.
- Young's Literal Translation (YLT)
- As to the house that king Solomon hath built for Jehovah, sixty cubits [is] its length, and twenty its breadth, and thirty cubits its height.
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
- 2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
- 3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- 4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
Cross references
- Ezekiel 41:1–15 ಯೆಹೆಜ್ಕೇಲನು 41:1–15ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು. ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು. ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು. ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು. ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ. ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು. ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು. ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು. ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು. ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- Ezekiel 40:1–41 ಯೆಹೆಜ್ಕೇಲನು 40:1–41ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು. ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು. ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು. ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು. ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು. ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು. ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು. ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು. ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು. ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು. ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು. ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು. ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ; ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು. ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು. ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು. ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು. ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ. ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ; ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು. ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು; ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು. ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
- Revelation 21:16–17 ಪ್ರಕಟನೆ 21:16–17ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
- Ezra 6:3–4 ಎಜ್ರನು 6:3–4ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ; ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
Original words (Hebrew)
- house · H1004בַּיִת bayith
- king · H4428מֶלֶךְ melek
- Solomon · H8010שְׁלֹמֹה Shᵉlômôh
- built · H1129בָּנָה bânâh
- length · H753אֹרֶךְ ʼôrek
- threescore · H8346שִׁשִּׁים shishshîym
- cubits · H520אַמָּה ʼammâh
- breadth · H7341רֹחַב rôchab
- twenty · H6242עֶשְׂרִים ʻesrîym
- height · H6967קוֹמָה qôwmâh
- thirty · H7970שְׁלוֹשִׁים shᵉlôwshîym
- cubits · H520אַמָּה ʼammâh