1 Kings · chapter 6 · verse 23
1 Kings 6:23 in Kannada
ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
Avanu daivoktiya sthaanadalli ippe maragalinda eradu keroobigalannu maadidanu. Ondondu hattu mola ettaravaagittu.
1 Kings 6:23 in English
- King James Version (KJV)
- And within the oracle he made two cherubims [of] olive tree, [each] ten cubits high.
- World English Bible (WEB)
- In the inner sanctuary he made two cherubim of olive wood, each ten cubits high.
- American Standard Version (ASV)
- And in the oracle he made two cherubim of olive-wood, each ten cubits high.
- Bible in Basic English (BBE)
- In the inmost room he made two winged beings of olive-wood, ten cubits high;
- Darby Translation (DBY)
- And he made in the oracle two cherubim of olive-wood, ten cubits high;
- Webster's Bible (WBS)
- And within the oracle he made two cherubim [of] olive tree, [each] ten cubits high.
- Young's Literal Translation (YLT)
- And he maketh within the oracle two cherubs, of the oil-tree, ten cubits [is] their height;
Read in context
- 21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
- 22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
- 23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
- 24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
- 25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
Cross references
- Exodus 37:7–9 ವಿಮೋಚನಕಾಂಡ 37:7–9ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Ezekiel 10:2–22 ಯೆಹೆಜ್ಕೇಲನು 10:2–22ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Isaiah 37:16 ಯೆಶಾಯ 37:16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
- Exodus 25:18–22 ವಿಮೋಚನಕಾಂಡ 25:18–22ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 2 Chronicles 3:10–13 2 ಪೂರ್ವಕಾಲವೃತ್ತಾಂತ 3:10–13ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು. ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು. ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು. ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.