1 Kings · chapter 6 · verse 36
1 Kings 6:36 in Kannada
ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
Avanu olagina angalavannu kattida kallugalinda mooru saalugalaagiyoo devadaarina stambhagalinda ondu saalaagiyoo kattisidanu.
1 Kings 6:36 in English
- King James Version (KJV)
- And he built the inner court with three rows of hewed stone, and a row of cedar beams.
- World English Bible (WEB)
- He built the inner court with three courses of cut stone and a course of cedar beams.
- American Standard Version (ASV)
- And he built the inner court with three courses of hewn stone, and a course of cedar beams.
- Bible in Basic English (BBE)
- And the inner space was walled with three lines of squared stones and a line of cedar-wood boards.
- Darby Translation (DBY)
- And he built the inner court of three rows of hewn stone, and a row of cedar-beams.
- Webster's Bible (WBS)
- And he built the inner court with three rows of hewn stone, and a row of cedar beams.
- Young's Literal Translation (YLT)
- And he buildeth the inner court, three rows of hewn work, and a row of beams of cedar.
Read in context
- 34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
- 35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- 37ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
- 38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Cross references
- 1 Kings 7:12 1 ಅರಸುಗಳು 7:12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- Exodus 38:9–20 ವಿಮೋಚನಕಾಂಡ 38:9–20ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು. ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು. ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು. ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ. ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು. ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- Exodus 27:9–19 ವಿಮೋಚನಕಾಂಡ 27:9–19ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು. ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು. ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು. ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು. ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- 2 Chronicles 4:9 2 ಪೂರ್ವಕಾಲವೃತ್ತಾಂತ 4:9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- 2 Chronicles 7:7 2 ಪೂರ್ವಕಾಲವೃತ್ತಾಂತ 7:7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.