1 Kings · chapter 8 · verse 27
1 Kings 8:27 in Kannada
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
Aadare devaru nishchayavaagi bhoomiya mele vaasavaagiruvano? Igo, aakaashagaloo aakaashaa kaashagaloo ninnannu hidiyalaaravu; haagaadare naanu kattisida ee mandiravu hidiyuvadu hege?
1 Kings 8:27 in English
- King James Version (KJV)
- But will God indeed dwell on the earth? behold, the heaven and heaven of heavens cannot contain thee; how much less this house that I have builded?
- World English Bible (WEB)
- But will God in very deed dwell on the earth? Behold, heaven and the heaven of heavens can’t contain you; how much less this house that I have built!
- American Standard Version (ASV)
- But will God in very deed dwell on the earth? behold, heaven and the heaven of heavens cannot contain thee; how much less this house that I have builded!
- Bible in Basic English (BBE)
- But is it truly possible that God may be housed on earth? see, heaven and the heaven of heavens are not wide enough to be your resting-place; how much less this house which I have made!
- Darby Translation (DBY)
- But will God indeed dwell on the earth? Behold, the heavens, and the heaven of heavens, cannot contain thee; how much less this house which I have built!
- Webster's Bible (WBS)
- But will God indeed dwell on the earth? behold, the heaven and heaven of heavens cannot contain thee; how much less this house that I have built?
- Young's Literal Translation (YLT)
- But, is it true? — God dwelleth on the earth! lo, the heavens, and the heavens of the heavens do not contain Thee, how much less this house which I have builded!
Read in context
- 25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
- 26ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
- 27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 28ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
- 29ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
Cross references
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Acts 7:48–49 ಅಪೊಸ್ತಲರ ಕೃತ್ಯಗಳು 7:48–49ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ-- ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- Psalm 139:7–16 ಕೀರ್ತನೆಗಳು 139:7–16ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ. ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Psalm 113:4 ಕೀರ್ತನೆಗಳು 113:4ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
- Acts 17:24 ಅಪೊಸ್ತಲರ ಕೃತ್ಯಗಳು 17:24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 2 Corinthians 12:2 2 ಕೊರಿಂಥದವರಿಗೆ 12:2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)