1 Kings · chapter 8 · verse 34
1 Kings 8:34 in Kannada
ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
Ee maneyalli ninage vijnyaapane maadidare aaga neenu paralokadinda keli ninna janaraada israayelyara paapavannu mannisi neenu avara tandegalige kotta deshakke avarannu tirugi baramaadu.
1 Kings 8:34 in English
- King James Version (KJV)
- Then hear thou in heaven, and forgive the sin of thy people Israel, and bring them again unto the land which thou gavest unto their fathers.
- World English Bible (WEB)
- then hear in heaven, and forgive the sin of your people Israel, and bring them again to the land which you gave to their fathers.
- American Standard Version (ASV)
- then hear thou in heaven, and forgive the sin of thy people Israel, and bring them again unto the land which thou gavest unto their fathers.
- Bible in Basic English (BBE)
- Then give ear in heaven, and let the sin of your people Israel have forgiveness, and take them back again into the land which you gave to their fathers.
- Darby Translation (DBY)
- then hear thou in the heavens, and forgive the sin of thy people Israel, and bring them again unto the land that thou gavest unto their fathers.
- Webster's Bible (WBS)
- Then hear thou in heaven, and forgive the sin of thy people Israel, and bring them again to the land which thou gavest to their fathers.
- Young's Literal Translation (YLT)
- then thou dost hear in the heavens, and hast forgiven the sin of Thy people Israel, and brought them back unto the ground that Thou gavest to their fathers.
Read in context
- 32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
- 33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
- 34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
- 35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
- 36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
Cross references
- Daniel 9:19 ದಾನಿಯೇಲನು 9:19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Jeremiah 31:27 ಯೆರೆಮೀಯ 31:27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- 1 Kings 8:30 1 ಅರಸುಗಳು 8:30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Joshua 21:43 ಯೆಹೋಶುವ 21:43ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
- Jeremiah 33:10–13 ಯೆರೆಮೀಯ 33:10–13ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು. ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- Jeremiah 31:4–9 ಯೆರೆಮೀಯ 31:4–9ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Ezra 1:1–6 ಎಜ್ರನು 1:1–6ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು. ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು. ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Exodus 6:8 ವಿಮೋಚನಕಾಂಡ 6:8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- Psalm 106:47 ಕೀರ್ತನೆಗಳು 106:47ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.