1 Kings · chapter 8 · verse 41
1 Kings 8:41 in Kannada
ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
Idallade ninna janaraada israayelinava nallade ninna hesarina nimitta doora deshadinda banda paradeshasthanannu kuritu enandare
1 Kings 8:41 in English
- King James Version (KJV)
- Moreover concerning a stranger, that [is] not of thy people Israel, but cometh out of a far country for thy name’s sake;
- World English Bible (WEB)
- “Moreover, concerning the foreigner, who is not of your people Israel, when he comes out of a far country for your name’s sake
- American Standard Version (ASV)
- Moreover concerning the foreigner, that is not of thy people Israel, when he shall come out of a far country for thy name’s sake
- Bible in Basic English (BBE)
- And as for the man from a strange land, who is not of your people Israel; when he comes from a far country because of the glory of your name:
- Darby Translation (DBY)
- And as to the stranger also, who is not of thy people Israel, but cometh out of a far country for thy name's sake
- Webster's Bible (WBS)
- Moreover, concerning a stranger, that [is] not of thy people Israel, but cometh out of a far country for thy name's sake;
- Young's Literal Translation (YLT)
- 'And also, unto the stranger who is not of Thy people Israel, and hath come from a land afar off for Thy name's sake —
Read in context
- 39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
- 40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
- 41ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
- 42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
- 43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
Cross references
- 1 Kings 10:1–2 1 ಅರಸುಗಳು 10:1–2ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
- Isaiah 56:3–7 ಯೆಶಾಯ 56:3–7ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Exodus 18:8–12 ವಿಮೋಚನಕಾಂಡ 18:8–12ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು. ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು. ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ. ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು. ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- Acts 8:27–40 ಅಪೊಸ್ತಲರ ಕೃತ್ಯಗಳು 8:27–40ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Matthew 8:5 ಮತ್ತಾಯನು 8:5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
- 2 Kings 5:1–7 2 ಅರಸುಗಳು 5:1–7ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು. ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು. ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು. ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು. ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು. ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು. ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- Acts 10:1–4 ಅಪೊಸ್ತಲರ ಕೃತ್ಯಗಳು 10:1–4ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- 2 Chronicles 6:32 2 ಪೂರ್ವಕಾಲವೃತ್ತಾಂತ 6:32ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Ruth 2:11 ರೂತಳು 2:11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
- John 12:20 ಯೋಹಾನನು 12:20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- Matthew 8:10–11 ಮತ್ತಾಯನು 8:10–11ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.