1 Kings · chapter 8 · verse 47
1 Kings 8:47 in Kannada
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
Avaru sere oyyalpatta deshadalli pashchaattaapapattu tirugi kondu taavu paapamaadi vakrabuddhiyinda nadedu drohamaadidevendu tammannu sereyaagi oyyuvavara deshadalli ninage vijnyaapanemaadi avarannu sereyaagi oyda shatrugala deshadalli tamma poornahrudayadindaloo
1 Kings 8:47 in English
- King James Version (KJV)
- [Yet] if they shall bethink themselves in the land whither they were carried captives, and repent, and make supplication unto thee in the land of them that carried them captives, saying, We have sinned, and have done perversely, we have committed wickedness;
- World English Bible (WEB)
- yet if they repent in the land where they are carried captive, and turn again, and make supplication to you in the land of those who carried them captive, saying, ‘We have sinned and have done perversely; we have dealt wickedly,’
- American Standard Version (ASV)
- yet if they shall bethink themselves in the land whither they are carried captive, and turn again, and make supplication unto thee in the land of them that carried them captive, saying, We have sinned, and have done perversely, we have dealt wickedly;
- Bible in Basic English (BBE)
- And if they take thought, in the land where they are prisoners, and are turned again to you, crying out in prayer to you in that land, and saying, We are sinners, we have done wrong, we have done evil;
- Darby Translation (DBY)
- and if they shall take it to heart in the land whither they were carried captive, and repent, and make supplication unto thee in the land of them that carried them captive, saying, We have sinned, and have done iniquity, we have dealt perversely;
- Webster's Bible (WBS)
- [Yet] if they shall bethink themselves in the land whither they were carried captives, and repent and make supplication to thee in the land of them that carried them captives, saying, We have sinned, and have done perversely, we have committed wickedness;
- Young's Literal Translation (YLT)
- and they have turned [it] back unto their heart in the land whither they have been taken captive, and have turned back, and made supplication unto Thee, in the land of their captors, saying, We have sinned and done perversely — we have done wickedly;
Read in context
- 45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- 46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
- 47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
- 48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- 49ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
Cross references
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Nehemiah 9:26–30 ನೆಹೆಮೀಯ 9:26–30ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Nehemiah 1:6–11 ನೆಹೆಮೀಯ 1:6–11ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ. ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ. ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು. ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ. ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು. ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Ezra 9:6–7 ಎಜ್ರನು 9:6–7ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು. ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Deuteronomy 30:1–2 ಧರ್ಮೋಪದೇಶಕಾಂಡ 30:1–2ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
- Leviticus 26:40–45 ಯಾಜಕಕಾಂಡ 26:40–45ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- 2 Chronicles 6:37 2 ಪೂರ್ವಕಾಲವೃತ್ತಾಂತ 6:37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Isaiah 64:6–12 ಯೆಶಾಯ 64:6–12ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ. ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ? ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?