1 Kings · chapter 8 · verse 6
1 Kings 8:6 in Kannada
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
Idallade yaajakaru kartana odambadikeya manjooshavannu mahaaparishuddha sthalavemba daivo ktiya mandirada sthaanakke tandu keroobigala rekkegala kelage adara sthaladalli ittaru.
1 Kings 8:6 in English
- King James Version (KJV)
- And the priests brought in the ark of the covenant of the LORD unto his place, into the oracle of the house, to the most holy [place, even] under the wings of the cherubims.
- World English Bible (WEB)
- The priests brought in the ark of the LORD’s covenant to its place, into the inner sanctuary of the house, to the most holy place, even under the cherubim’s wings.
- American Standard Version (ASV)
- And the priests brought in the ark of the covenant of Jehovah unto its place, into the oracle of the house, to the most holy place, even under the wings of the cherubim.
- Bible in Basic English (BBE)
- And the priests took the ark of the agreement of the Lord and put it in its place in the inner room of the house, in the most holy place, under the wings of the winged ones.
- Darby Translation (DBY)
- And the priests brought in the ark of the covenant of Jehovah to its place, into the oracle of the house, into the most holy place, under the wings of the cherubim;
- Webster's Bible (WBS)
- And the priests brought the ark of the covenant of the LORD to its place, into the oracle of the house, to the most holy [place] , [even] under the wings of the cherubim.
- Young's Literal Translation (YLT)
- And the priests bring in the ark of the covenant of Jehovah unto its place, unto the oracle of the house, unto the holy of holies, unto the place of the wings of the cherubs;
Read in context
- 4ಯಾಜಕರೂ ಲೇವಿಯರೂ ಇವುಗಳನ್ನು ತಂದರು.
- 5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
- 6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- 7ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
- 8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
Cross references
- 1 Kings 6:27 1 ಅರಸುಗಳು 6:27ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
- 1 Kings 6:19 1 ಅರಸುಗಳು 6:19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Exodus 26:33–34 ವಿಮೋಚನಕಾಂಡ 26:33–34ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Isaiah 37:16 ಯೆಶಾಯ 37:16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
- 1 Kings 8:4 1 ಅರಸುಗಳು 8:4ಯಾಜಕರೂ ಲೇವಿಯರೂ ಇವುಗಳನ್ನು ತಂದರು.
- Exodus 40:20–21 ವಿಮೋಚನಕಾಂಡ 40:20–21ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- Exodus 37:9 ವಿಮೋಚನಕಾಂಡ 37:9ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- Exodus 25:20–22 ವಿಮೋಚನಕಾಂಡ 25:20–22ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.