1 Kings · chapter 8 · verse 61
1 Kings 8:61 in Kannada
ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
Indina haageye aatana kattalegalalli nadeyaloo aatana aajnyegalannu kaikollaloo namma devaraada kartana sangada nimma hrudayavu sampoornavaagirali andanu.
1 Kings 8:61 in English
- King James Version (KJV)
- Let your heart therefore be perfect with the LORD our God, to walk in his statutes, and to keep his commandments, as at this day.
- World English Bible (WEB)
- “Let your heart therefore be perfect with the LORD our God, to walk in his statutes, and to keep his commandments, as it is today.”
- American Standard Version (ASV)
- Let your heart therefore be perfect with Jehovah our God, to walk in his statutes, and to keep his commandments, as at this day.
- Bible in Basic English (BBE)
- Then let your hearts be without sin before the Lord our God, walking in his laws and keeping his orders as at this day.
- Darby Translation (DBY)
- and that your heart may be perfect with Jehovah our God, to walk in his statutes and to keep his commandments, as at this day.
- Webster's Bible (WBS)
- Let your heart therefore be perfect with the LORD our God, to walk in his statutes, and to keep his commandments, as at this day.
- Young's Literal Translation (YLT)
- and your heart hath been perfect with Jehovah our God, to walk in His statutes, and to keep His commands, as [at] this day.'
Read in context
- 59ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
- 60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
- 61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- 62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
- 63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
Cross references
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 1 Kings 15:14 1 ಅರಸುಗಳು 15:14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 1 Kings 15:3 1 ಅರಸುಗಳು 15:3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
- Deuteronomy 18:13 ಧರ್ಮೋಪದೇಶಕಾಂಡ 18:13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Job 1:8 ಯೋಬನು 1:8ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Philippians 3:12–16 ಫಿಲಿಪ್ಪಿಯವರಿಗೆ 3:12–16ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು. ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.