1 Kings · chapter 9 · verse 20
1 Kings 9:20 in Kannada
ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
Israayelina makkalallade amoryaru hitteeyaru perijjeeyaru hivveeyaru yeboosi yaru ivaralli ulida samasta janaroo
1 Kings 9:20 in English
- King James Version (KJV)
- [And] all the people [that were] left of the Amorites, Hittites, Perizzites, Hivites, and Jebusites, which [were] not of the children of Israel,
- World English Bible (WEB)
- As for all the people who were left of the Amorites, the Hittites, the Perizzites, the Hivites, and the Jebusites, who were not of the children of Israel—
- American Standard Version (ASV)
- As for all the people that were left of the Amorites, the Hittites, the Perizzites, the Hivites, and the Jebusites, who were not of the children of Israel;
- Bible in Basic English (BBE)
- As for the rest of the Amorites, the Hittites, the Perizzites, the Hivites, and the Jebusites, who were not children of Israel;
- Darby Translation (DBY)
- All the people that were left of the Amorites, the Hittites, the Perizzites, the Hivites, and the Jebusites, who were not of the children of Israel,
- Webster's Bible (WBS)
- [And] all the people [that were] left of the Amorites, Hittites, Perizzites, Hivites, and Jebusites, who [were] not of the children of Israel,
- Young's Literal Translation (YLT)
- The whole of the people that is left of the Amorite, the Hittite, the Perizzite, the Hivite, and the Jebusite, who [are] not of the sons of Israel —
Read in context
- 18ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
- 19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- 20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
- 21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
Cross references
- Genesis 15:19–21 ಆದಿಕಾಂಡ 15:19–21ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Exodus 23:23 ವಿಮೋಚನಕಾಂಡ 23:23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
- 2 Chronicles 8:7–18 2 ಪೂರ್ವಕಾಲವೃತ್ತಾಂತ 8:7–18ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು. ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು. ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು. ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು. ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು. ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು. ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು. ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ. ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು. ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು. ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
- Exodus 23:28–33 ವಿಮೋಚನಕಾಂಡ 23:28–33ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ. ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Exodus 34:11–12 ವಿಮೋಚನಕಾಂಡ 34:11–12ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ. ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
- Deuteronomy 7:1–3 ಧರ್ಮೋಪದೇಶಕಾಂಡ 7:1–3ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.