1 Peter · chapter 1 · verse 17
1 Peter 1:17 in Kannada
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
Pratiyobbana kelasavannu nodi pakshapaata villade teerpumaaduvaatanannu neevu tande yendu bedikolluvavaraagiralaagi nimma pravaasa kaalavannu bhayadinda kaleyiri.
1 Peter 1:17 in English
- King James Version (KJV)
- And if ye call on the Father, who without respect of persons judgeth according to every man’s work, pass the time of your sojourning [here] in fear:
- World English Bible (WEB)
- If you call on him as Father, who without respect of persons judges according to each man’s work, pass the time of your living as foreigners here in reverent fear,
- American Standard Version (ASV)
- And if ye call on him as Father, who without respect of persons judgeth according to each man’s work, pass the time of your sojourning in fear:
- Bible in Basic English (BBE)
- And if you give the name of Father to him who, judging every man by his acts, has no respect for a man's position, then go in fear while you are on this earth:
- Darby Translation (DBY)
- And if ye invoke as Father him who, without regard of persons, judges according to the work of each, pass your time of sojourn in fear,
- Webster's Bible (WBS)
- And if ye call on the Father, who without respect of persons judgeth according to every man's work, pass the time of your sojourning [here] in fear:
- Young's Literal Translation (YLT)
- and if on the Father ye do call, who without acceptance of persons is judging according to the work of each, in fear the time of your sojourn pass ye,
Read in context
- 15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
- 16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- 17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- 18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- 19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
Cross references
- Acts 10:34–35 ಅಪೊಸ್ತಲರ ಕೃತ್ಯಗಳು 10:34–35ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Hebrews 12:28 ಇಬ್ರಿಯರಿಗೆ 12:28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Matthew 7:7–11 ಮತ್ತಾಯನು 7:7–11ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
Original words (Greek)
- And · G2532καί kaí
- if · G1487εἰ ei
- on · G1941ἐπικαλέομαι epikaléomai
- Father · G3962πατήρ patḗr
- who · G3588ὁ ho
- persons · G678ἀπροσωπολήπτως aprosōpolḗptōs
- judgeth · G2919κρίνω krínō
- to · G2596κατά katá
- man’s · G1538ἕκαστος hékastos
- work · G2041ἔργον érgon
- pass · G390ἀναστρέφω anastréphō
- time · G5550χρόνος chrónos
- your · G5216ὑμῶν hymōn
- sojourning · G3940παροικία paroikía
- in · G1722ἐν en
- fear · G5401φόβος phóbos