1 Peter · chapter 2 · verse 13
1 Peter 2:13 in Kannada
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
Manushyana pratiyondu kattalegoo kartana nimitta neevu adheenaraagirri. Arasanu sarvaadhikaari entaloo
1 Peter 2:13 in English
- King James Version (KJV)
- Submit yourselves to every ordinance of man for the Lord’s sake: whether it be to the king, as supreme;
- World English Bible (WEB)
- Therefore subject yourselves to every ordinance of man for the Lord’s sake: whether to the king, as supreme,
- American Standard Version (ASV)
- Be subject to every ordinance of man for the Lord’s sake: whether to the king, as supreme;
- Bible in Basic English (BBE)
- Keep all the laws of men because of the Lord; those of the king, who is over all,
- Darby Translation (DBY)
- Be in subjection [therefore] to every human institution for the Lord's sake; whether to [the] king as supreme,
- Webster's Bible (WBS)
- Submit yourselves to every ordinance of man for the Lord's sake: whether to the king, as supreme;
- Young's Literal Translation (YLT)
- Be subject, then, to every human creation, because of the Lord, whether to a king, as the highest,
Read in context
- 11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 13ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
- 14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- 15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
Cross references
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- Romans 13:1–7 ರೋಮಾಪುರದವರಿಗೆ 13:1–7ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Timothy 2:1–2 1 ತಿಮೊಥೆಯನಿಗೆ 2:1–2ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ. ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- Luke 20:25 ಲೂಕನು 20:25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- Jeremiah 29:7 ಯೆರೆಮೀಯ 29:7ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Mark 12:17 ಮಾರ್ಕನು 12:17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- Ephesians 5:21 ಎಫೆಸದವರಿಗೆ 5:21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Proverbs 17:11 ಜ್ಞಾನೋಕ್ತಿಗಳು 17:11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
- Jude 1:8–10 ಯೂದನು 1:8–10ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.