1 Peter · chapter 4 · verse 16
1 Peter 4:16 in Kannada
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
Kraistanaagi baadhepattare avanu naachike padade adaralliye devarannu ghanapadisali.
1 Peter 4:16 in English
- King James Version (KJV)
- Yet if [any man suffer] as a Christian, let him not be ashamed; but let him glorify God on this behalf.
- World English Bible (WEB)
- But if one of you suffers for being a Christian, let him not be ashamed; but let him glorify God in this matter.
- American Standard Version (ASV)
- but if [a man suffer] as a Christian, let him not be ashamed; but let him glorify God in this name.
- Bible in Basic English (BBE)
- But if he undergoes punishment as a Christian, that is no shame to him; let him give glory to God in this name.
- Darby Translation (DBY)
- but if as a christian, let him not be ashamed, but glorify God in this name.
- Webster's Bible (WBS)
- Yet if [any man suffereth] as a Christian, let him not be ashamed; but let him glorify God on this behalf.
- Young's Literal Translation (YLT)
- and if as a Christian, let him not be ashamed; and let him glorify God in this respect;
Read in context
- 14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
- 16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- 18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Cross references
- 1 Peter 3:17–18 1 ಪೇತ್ರನು 3:17–18ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Philippians 1:29 ಫಿಲಿಪ್ಪಿಯವರಿಗೆ 1:29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- James 1:2–4 ಯಾಕೋಬನು 1:2–4ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Ephesians 3:13–15 ಎಫೆಸದವರಿಗೆ 3:13–15ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ. ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Romans 5:2–5 ರೋಮಾಪುರದವರಿಗೆ 5:2–5ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Isaiah 54:4 ಯೆಶಾಯ 54:4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- Acts 26:28 ಅಪೊಸ್ತಲರ ಕೃತ್ಯಗಳು 26:28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
- Hebrews 12:2–3 ಇಬ್ರಿಯರಿಗೆ 12:2–3ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.