1 Peter · chapter 5 · verse 4
1 Peter 5:4 in Kannada
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
Pradhaana kurubanu pratyakshanaaguvaaga neevu endigoo baadada mahimeyulla kireetavannu honduviri.
1 Peter 5:4 in English
- King James Version (KJV)
- And when the chief Shepherd shall appear, ye shall receive a crown of glory that fadeth not away.
- World English Bible (WEB)
- When the chief Shepherd is revealed, you will receive the crown of glory that doesn’t fade away.
- American Standard Version (ASV)
- And when the chief Shepherd shall be manifested, ye shall receive the crown of glory that fadeth not away.
- Bible in Basic English (BBE)
- And at the coming of the chief Keeper of the sheep, you will be given the eternal crown of glory.
- Darby Translation (DBY)
- And when the chief shepherd is manifested ye shall receive the unfading crown of glory.
- Webster's Bible (WBS)
- And when the chief Shepherd shall appear, ye shall receive a crown of glory that fadeth not away.
- Young's Literal Translation (YLT)
- and at the manifestation of the chief Shepherd, ye shall receive the unfading crown of glory.
Read in context
- 2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- 6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
Cross references
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- 1 Corinthians 9:25 1 ಕೊರಿಂಥದವರಿಗೆ 9:25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Psalm 23:1 ಕೀರ್ತನೆಗಳು 23:1ಕರ್ತನು ನನ್ನ ಕುರುಬನು; ಕೊರತೆಪಡೆನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.