1 Samuel · chapter 10 · verse 1
1 Samuel 10:1 in Kannada
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
Aaga samuvelanu enneya paatreyannu takkondu avana taleya mele hoydu muddittu avanige--kartanu ninnannu tanna baadhyateya mele naayakanaagiralu abhisheka maadiddaanallavo?
1 Samuel 10:1 in English
- King James Version (KJV)
- Then Samuel took a vial of oil, and poured [it] upon his head, and kissed him, and said, [Is it] not because the LORD hath anointed thee [to be] captain over his inheritance?
- World English Bible (WEB)
- Then Samuel took the vial of oil and poured it on his head, then kissed him and said, “Hasn’t the LORD anointed you to be prince over his inheritance?
- American Standard Version (ASV)
- Then Samuel took the vial of oil, and poured it upon his head, and kissed him, and said, Is it not that Jehovah hath anointed thee to be prince over his inheritance?
- Bible in Basic English (BBE)
- Then Samuel took the bottle of oil, and put the oil on his head and gave him a kiss and said, Is not the Lord with the holy oil making you ruler over Israel, his people? and you will have authority over the people of the Lord, and you will make them safe from the hands of their attackers round about them, and this will be the sign for you:
- Darby Translation (DBY)
- Then Samuel took the vial of oil, and poured it upon his head, and kissed him, and said, Is it not because Jehovah has anointed thee prince over his inheritance?
- Webster's Bible (WBS)
- Then Samuel took a vial of oil, and poured [it] upon his head, and kissed him, and said, [Is it] not because the LORD hath anointed thee [to be] captain over his inheritance?
- Young's Literal Translation (YLT)
- And Samuel taketh the vial of the oil, and poureth on his head, and kisseth him, and saith, 'Is it not because Jehovah hath appointed thee over His inheritance for leader?
Read in context
- 1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
- 3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
Cross references
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Psalm 78:71 ಕೀರ್ತನೆಗಳು 78:71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Acts 13:21 ಅಪೊಸ್ತಲರ ಕೃತ್ಯಗಳು 13:21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 2 Kings 9:3–6 2 ಅರಸುಗಳು 9:3–6ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು. ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು. ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- 1 Samuel 26:11 1 ಸಮುವೇಲನು 26:11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- 2 Kings 20:5 2 ಅರಸುಗಳು 20:5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
- 2 Kings 9:1 2 ಅರಸುಗಳು 9:1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- 1 Samuel 8:19 1 ಸಮುವೇಲನು 8:19ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
- 1 Kings 19:18 1 ಅರಸುಗಳು 19:18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.