1 Samuel · chapter 10 · verse 25
1 Samuel 10:25 in Kannada
ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
Samuvelanu raajyada paddhati yannu janarige helikottu ondu pustakadalli baredu kartana munde ittanu. Aaga samuvelanu janarannellaa avaravara manege kaluhisibittanu.
1 Samuel 10:25 in English
- King James Version (KJV)
- Then Samuel told the people the manner of the kingdom, and wrote [it] in a book, and laid [it] up before the LORD. And Samuel sent all the people away, every man to his house.
- World English Bible (WEB)
- Then Samuel told the people the regulations of the kingdom, and wrote it in a book and laid it up before the LORD. Samuel sent all the people away, every man to his house.
- American Standard Version (ASV)
- Then Samuel told the people the manner of the kingdom, and wrote it in a book, and laid it up before Jehovah. And Samuel sent all the people away, every man to his house.
- Bible in Basic English (BBE)
- Then Samuel gave the people the laws of the kingdom, writing them in a book which he put in a safe place before the Lord. And Samuel sent all the people away, every man to his house.
- Darby Translation (DBY)
- And Samuel told the people the right of the kingdom, and wrote it in the book, and laid it before Jehovah. And Samuel sent all the people away, every man to his house.
- Webster's Bible (WBS)
- Then Samuel told the people the manner of the kingdom, and wrote [it] in a book, and laid [it] up before the LORD. And Samuel sent all the people away, every man to his house.
- Young's Literal Translation (YLT)
- And Samuel speaketh unto the people the right of the kingdom, and writeth in a book, and placeth before Jehovah; and Samuel sendeth all the people away, each to his house.
Read in context
- 23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
- 24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 25ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
- 26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Cross references
- 1 Samuel 8:11–18 1 ಸಮುವೇಲನು 8:11–18ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು. ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು. ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ. ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- Deuteronomy 17:14–20 ಧರ್ಮೋಪದೇಶಕಾಂಡ 17:14–20ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು. ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ. ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು. ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- 1 Timothy 2:2 1 ತಿಮೊಥೆಯನಿಗೆ 2:2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- Romans 13:1–7 ರೋಮಾಪುರದವರಿಗೆ 13:1–7ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Ezekiel 46:16–18 ಯೆಹೆಜ್ಕೇಲನು 46:16–18ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ. ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು. ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- 1 Peter 2:13–14 1 ಪೇತ್ರನು 2:13–14ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- Ezekiel 45:9–10 ಯೆಹೆಜ್ಕೇಲನು 45:9–10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು.
Original words (Hebrew)
- Samuel · H8050שְׁמוּאֵל Shᵉmûwʼêl
- told · H1696דָבַר dâbar
- people · H5971עַם ʻam
- manner · H4941מִשְׁפָּט mishpâṭ
- kingdom · H4410מְלוּכָה mᵉlûwkâh
- wrote · H3789כָּתַב kâthab
- book · H5612סֵפֶר çêpher
- up · H3240יָנַח yânach
- before · H6440פָּנִים pânîym
- Samuel · H8050שְׁמוּאֵל Shᵉmûwʼêl
- sent · H7971שָׁלַח shâlach
- people · H5971עַם ʻam
- away · H7971שָׁלַח shâlach
- man · H376אִישׁ ʼîysh
- house · H1004בַּיִת bayith