1 Samuel · chapter 11 · verse 1
1 Samuel 11:1 in Kannada
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
Ammoniyanaada naahaashanu bandu gilyaadinalliruva yaabeshige virodha vaagi dandu irisidanu. Aaga yaabeshina janare llaru naahaashanige--neenu namma sangada odamba dike maadidare naavu ninnannu sevisuvevu andaru.
1 Samuel 11:1 in English
- King James Version (KJV)
- Then Nahash the Ammonite came up, and encamped against Jabesh-gilead: and all the men of Jabesh said unto Nahash, Make a covenant with us, and we will serve thee.
- World English Bible (WEB)
- Then Nahash the Ammonite came up and encamped against Jabesh Gilead; and all the men of Jabesh said to Nahash, “Make a covenant with us, and we will serve you.”
- American Standard Version (ASV)
- Then Nahash the Ammonite came up, and encamped against Jabesh-gilead: and all the men of Jabesh said unto Nahash, Make a covenant with us, and we will serve thee.
- Bible in Basic English (BBE)
- Then about a month after this, Nahash the Ammonite came up and put his forces in position for attacking Jabesh-gilead: and all the men of Jabesh said to Nahash, Make an agreement with us and we will be your servants.
- Darby Translation (DBY)
- And Nahash the Ammonite came up and encamped against Jabesh-Gilead. And all the men of Jabesh said to Nahash, Make a covenant with us, and we will serve thee.
- Webster's Bible (WBS)
- Then Nahash the Ammonite came up, and encamped against Jabesh-gilead: and all the men of Jabesh said to Nahash, Make a covenant with us, and we will serve thee.
- Young's Literal Translation (YLT)
- And Nahash the Ammonite cometh up, and encampeth against Jabesh-Gilead, and all the men of Jabesh say unto Nahash, 'Make with us a covenant, and we serve thee.'
Read in context
- 1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
- 2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
- 3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
Cross references
- 1 Samuel 12:12 1 ಸಮುವೇಲನು 12:12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
- 1 Kings 20:34 1 ಅರಸುಗಳು 20:34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- Ezekiel 17:13 ಯೆಹೆಜ್ಕೇಲನು 17:13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
- Judges 21:8 ನ್ಯಾಯಸ್ಥಾಪಕರು 21:8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
- Genesis 26:28 ಆದಿಕಾಂಡ 26:28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- Exodus 23:32 ವಿಮೋಚನಕಾಂಡ 23:32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Job 41:4 ಯೋಬನು 41:4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
- Deuteronomy 23:3 ಧರ್ಮೋಪದೇಶಕಾಂಡ 23:3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- Judges 21:10–25 ನ್ಯಾಯಸ್ಥಾಪಕರು 21:10–25ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ. ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು. ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು. ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು. ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು. ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು. ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು. ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು. ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು. ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ. ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು. ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು. ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು. ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು. ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
- Judges 11:8–33 ನ್ಯಾಯಸ್ಥಾಪಕರು 11:8–33ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು. ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು. ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು. ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು. ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ. ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು. ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು. ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ? ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು. ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ? ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು? ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ. ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು. ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು. ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು. ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
- Isaiah 36:16 ಯೆಶಾಯ 36:16ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
- Judges 10:7 ನ್ಯಾಯಸ್ಥಾಪಕರು 10:7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
Original words (Hebrew)
- Nahash · H5176נָחָשׁ Nâchâsh
- Ammonite · H5984עַמּוֹנִי ʻAmmôwnîy
- up · H5927עָלָה ʻâlâh
- encamped · H2583חָנָה chânâh
- Jabesh-gilead · H3003יָבֵשׁ Yâbêsh
- men · H582אֱנוֹשׁ ʼĕnôwsh
- Jabesh · H3003יָבֵשׁ Yâbêsh
- said · H559אָמַר ʼâmar
- Nahash · H5176נָחָשׁ Nâchâsh
- Make · H3772כָּרַת kârath
- covenant · H1285בְּרִית bᵉrîyth
- serve · H5647עָבַד ʻâbad