1 Samuel · chapter 12 · verse 15
1 Samuel 12:15 in Kannada
ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
Neevu kartana maatige vidheyaraagadiddare, kartana aajnyege virodhavaagi tirigi biddare, kartana hastavu nimma tandegalige virodhavaagiddanteye nimagoo virodhavaagi ruvadu.
1 Samuel 12:15 in English
- King James Version (KJV)
- But if ye will not obey the voice of the LORD, but rebel against the commandment of the LORD, then shall the hand of the LORD be against you, as [it was] against your fathers.
- World English Bible (WEB)
- But if you will not listen to the LORD’s voice, but rebel against the commandment of the LORD, then the LORD’s hand will be against you, as it was against your fathers.
- American Standard Version (ASV)
- but if ye will not hearken unto the voice of Jehovah, but rebel against the commandment of Jehovah, then will the hand of Jehovah be against you, as it was against your fathers.
- Bible in Basic English (BBE)
- But if you do not give ear to the voice of the Lord, but go against his orders, then the hand of the Lord will be against you and against your king for your destruction, as it was against your fathers.
- Darby Translation (DBY)
- But if ye will not hearken to the voice of Jehovah, and if ye rebel against the commandment of Jehovah, then will the hand of Jehovah be against you, as against your fathers.
- Webster's Bible (WBS)
- But if ye will not obey the voice of the LORD, but rebel against the commandment of the LORD, then shall the hand of the LORD be against you, as [it was] against your fathers.
- Young's Literal Translation (YLT)
- 'And if ye do not hearken to the voice of Jehovah — then ye have provoked the mouth of Jehovah, and the hand of Jehovah hath been against you, and against your fathers.
Read in context
- 13ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.
- 14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
- 15ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
- 16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.
- 17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
Cross references
- Joshua 24:20 ಯೆಹೋಶುವ 24:20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 1 Samuel 12:9 1 ಸಮುವೇಲನು 12:9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
- Leviticus 26:14–30 ಯಾಜಕಕಾಂಡ 26:14–30ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- 1 Samuel 5:9 1 ಸಮುವೇಲನು 5:9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.