1 Samuel · chapter 12 · verse 21
1 Samuel 12:21 in Kannada
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
Avu vyartha vaadavugale sari. Yaakandare kartanu tanna mahattaada hesarigoskara tanna janarannu kaibidu vadilla.
1 Samuel 12:21 in English
- King James Version (KJV)
- And turn ye not aside: for [then should ye go] after vain [things], which cannot profit nor deliver; for they [are] vain.
- World English Bible (WEB)
- Don’t turn away to go after vain things which can’t profit or deliver, for they are vain.
- American Standard Version (ASV)
- and turn ye not aside; for [then would ye go] after vain things which cannot profit nor deliver, for they are vain.
- Bible in Basic English (BBE)
- And do not go from the right way turning to those false gods in which there is no profit and no salvation, for they are false.
- Darby Translation (DBY)
- and turn ye not aside; for [it would be] after vain things which cannot profit nor deliver; for they are vain.
- Webster's Bible (WBS)
- And turn ye not aside: for then [would ye go] after vain [things] , which cannot profit nor deliver; for they [are] vain.
- Young's Literal Translation (YLT)
- and ye do not turn aside after the vain things which do not profit nor deliver, for they [are] vain,
Read in context
- 19ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- 20ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
- 21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
- 22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- 23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
Cross references
- Habakkuk 2:18 ಹಬಕ್ಕೂಕ 2:18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Deuteronomy 11:16 ಧರ್ಮೋಪದೇಶಕಾಂಡ 11:16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Isaiah 44:9–10 ಯೆಶಾಯ 44:9–10ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.