1 Samuel · chapter 12 · verse 25
1 Samuel 12:25 in Kannada
ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
Aadare neevu kettatanavannu innoo maadidare neevoo nimma arasanoo naashavaaguviri andanu.
1 Samuel 12:25 in English
- King James Version (KJV)
- But if ye shall still do wickedly, ye shall be consumed, both ye and your king.
- World English Bible (WEB)
- But if you keep doing evil, you will be consumed, both you and your king.”
- American Standard Version (ASV)
- But if ye shall still do wickedly, ye shall be consumed, both ye and your king.
- Bible in Basic English (BBE)
- But if you still do evil, destruction will overtake you and your king.
- Darby Translation (DBY)
- But if ye do wickedly, ye shall perish, both ye and your king.
- Webster's Bible (WBS)
- But if ye shall still do wickedly, ye will be consumed, both ye and your king.
- Young's Literal Translation (YLT)
- and if ye really do evil, both ye and your king are consumed.'
Read in context
- 23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- 24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- 25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
Cross references
- Joshua 24:20 ಯೆಹೋಶುವ 24:20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- 1 Samuel 31:1–5 1 ಸಮುವೇಲನು 31:1–5ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
- Hosea 10:3 ಹೋಶೇಯ 10:3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Deuteronomy 32:15–44 ಧರ್ಮೋಪದೇಶಕಾಂಡ 32:15–44ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು! ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ? ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ. ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.