1 Samuel · chapter 12 · verse 7
1 Samuel 12:7 in Kannada
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
Aadadarinda eega nilliri; kartanu nimagoo nimma tandegaligoo maadida samasta neetiyulla kriyegala vishaya kartana munde nimage nyaaya heluttene.
1 Samuel 12:7 in English
- King James Version (KJV)
- Now therefore stand still, that I may reason with you before the LORD of all the righteous acts of the LORD, which he did to you and to your fathers.
- World English Bible (WEB)
- Now therefore stand still, that I may plead with you before the LORD concerning all the righteous acts of the LORD, which he did to you and to your fathers.
- American Standard Version (ASV)
- Now therefore stand still, that I may plead with you before Jehovah concerning all the righteous acts of Jehovah, which he did to you and to your fathers.
- Bible in Basic English (BBE)
- Keep your places now, while I take up the argument with you before the Lord, and give you the story of the righteousness of the Lord, which he has made clear by his acts to you and to your fathers.
- Darby Translation (DBY)
- And now stand still, that I may plead with you before Jehovah of all the righteous acts of Jehovah which he did to you and to your fathers.
- Webster's Bible (WBS)
- Now therefore stand still, that I may reason with you before the LORD of all the righteous acts of the LORD, which he did to you and to your fathers.
- Young's Literal Translation (YLT)
- and, now, station yourselves, and I judge you before Jehovah, with all the righteous acts of Jehovah, which He did with you, and with your fathers.
Read in context
- 5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- 6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
- 7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
- 8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
- 9ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
Cross references
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Acts 17:3 ಅಪೊಸ್ತಲರ ಕೃತ್ಯಗಳು 17:3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Micah 6:1–5 ಮೀಕ 6:1–5ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ. ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು. ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು. ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Isaiah 5:3–4 ಯೆಶಾಯ 5:3–4ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Ezekiel 18:25–30 ಯೆಹೆಜ್ಕೇಲನು 18:25–30ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ. ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು. ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Judges 5:11 ನ್ಯಾಯಸ್ಥಾಪಕರು 5:11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.