1 Samuel · chapter 13 · verse 7
1 Samuel 13:7 in Kannada
ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
Idallade ibriyaralliruva kelavaru yordanannu daati gaad deshakkoo gilyaadigoo hodaru. Aadare saulanu innoo gilgaalinalliddanu; janarellaru nadugidavaraagi avanannu himbaalisidaru.
1 Samuel 13:7 in English
- King James Version (KJV)
- And [some of] the Hebrews went over Jordan to the land of Gad and Gilead. As for Saul, he [was] yet in Gilgal, and all the people followed him trembling.
- World English Bible (WEB)
- Now some of the Hebrews had gone over the Jordan to the land of Gad and Gilead; but as for Saul, he was yet in Gilgal, and all the people followed him trembling.
- American Standard Version (ASV)
- Now some of the Hebrews had gone over the Jordan to the land of Gad and Gilead; but as for Saul, he was yet in Gilgal, and all the people followed him trembling.
- Bible in Basic English (BBE)
- And a great number of the people had gone over Jordan to the land of Gad and Gilead; but Saul was still in Gilgal, and all the people went after him shaking in fear.
- Darby Translation (DBY)
- And the Hebrews went over the Jordan into the land of Gad and Gilead. And Saul was yet in Gilgal, and all the people followed him trembling.
- Webster's Bible (WBS)
- And [some of] the Hebrews went over Jordan to the land of Gad and Gilead. As for Saul, he [was] yet in Gilgal, and all the people followed him trembling.
- Young's Literal Translation (YLT)
- And Hebrews have passed over the Jordan to the land of Gad and Gilead; and Saul [is] yet in Gilgal, and all the people have trembled after him.
Read in context
- 5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- 7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
- 8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
- 9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
Cross references
- Hosea 11:10–11 ಹೋಶೇಯ 11:10–11ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು; ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Judges 7:3 ನ್ಯಾಯಸ್ಥಾಪಕರು 7:3ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
- Joshua 13:24–31 ಯೆಹೋಶುವ 13:24–31ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Numbers 32:1–5 ಅರಣ್ಯಕಾಂಡ 32:1–5ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- Deuteronomy 20:8 ಧರ್ಮೋಪದೇಶಕಾಂಡ 20:8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.