1 Samuel · chapter 14 · verse 18
1 Samuel 14:18 in Kannada
ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
Aaga saulanu aheeyanige -- neenu devara manjooshavannu takkondu baa andanu. Yaakandare devara manjooshavu aa kaaladalli israayel makkala baliyallittu.
1 Samuel 14:18 in English
- King James Version (KJV)
- And Saul said unto Ahiah, Bring hither the ark of God. For the ark of God was at that time with the children of Israel.
- World English Bible (WEB)
- Saul said to Ahijah, “Bring God’s ark here.” For God’s ark was with the children of Israel at that time.
- American Standard Version (ASV)
- And Saul said unto Ahijah, Bring hither the ark of God. For the ark of God was [there] at that time with the children of Israel.
- Bible in Basic English (BBE)
- And Saul said to Ahijah, Let the ephod come here. For he went before Israel with the ephod at that time.
- Darby Translation (DBY)
- And Saul said to Ahijah, Bring hither the ark of God. For the ark of God was at that time with the children of Israel.
- Webster's Bible (WBS)
- And Saul said to Ahiah, Bring hither the ark of God. For the ark of God was at that time with the children of Israel.
- Young's Literal Translation (YLT)
- And Saul saith to Ahiah, 'Bring nigh the ark of God;' for the ark of God hath been on that day with the sons of Israel.
Read in context
- 16ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
- 17ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
- 18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
- 19ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.
- 20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
Cross references
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- 1 Samuel 30:7–8 1 ಸಮುವೇಲನು 30:7–8ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- Judges 20:27–28 ನ್ಯಾಯಸ್ಥಾಪಕರು 20:27–28ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 2 Samuel 11:11 2 ಸಮುವೇಲನು 11:11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
- 2 Samuel 15:24–26 2 ಸಮುವೇಲನು 15:24–26ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು. ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- 1 Samuel 4:3–5 1 ಸಮುವೇಲನು 4:3–5ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು; ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- 1 Samuel 5:2 1 ಸಮುವೇಲನು 5:2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
- 1 Samuel 7:1 1 ಸಮುವೇಲನು 7:1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.