1 Samuel · chapter 15 · verse 23
1 Samuel 15:23 in Kannada
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
Eduru beeluvadu kani heluvante paapa vaagide, hatavu dushtatana mattu vigrahaaraadhanegala haage ide. Neenu kartana vaakyavannu tiraskaara maadiddarinda aatanu ninnannu arasanaagirada haage tiraskaara maadibittanu andanu.
1 Samuel 15:23 in English
- King James Version (KJV)
- For rebellion [is as] the sin of witchcraft, and stubbornness [is as] iniquity and idolatry. Because thou hast rejected the word of the LORD, he hath also rejected thee from [being] king.
- World English Bible (WEB)
- For rebellion is as the sin of witchcraft, and stubbornness is as idolatry and teraphim. Because you have rejected the LORD’s word, he has also rejected you from being king.”
- American Standard Version (ASV)
- For rebellion is as the sin of witchcraft, and stubbornness is as idolatry and teraphim. Because thou hast rejected the word of Jehovah, he hath also rejected thee from being king.
- Bible in Basic English (BBE)
- For to go against his orders is like the sin of those who make use of secret arts, and pride is like giving worship to images. Because you have put away from you the word of the Lord, he has put you from your place as king.
- Darby Translation (DBY)
- For rebellion is [as] the sin of divination, And selfwill is [as] iniquity and idolatry. Because thou hast rejected the word of Jehovah, He hath also rejected thee from being king.
- Webster's Bible (WBS)
- For rebellion [is as] the sin of witchcraft, and stubbornness [is as] iniquity and idolatry. Because thou hast rejected the word of the LORD, he hath also rejected thee from [being] king.
- Young's Literal Translation (YLT)
- for a sin of divination [is] rebellion, and iniquity and teraphim [is] stubbornness; because thou hast rejected the word of Jehovah, He also doth reject thee from [being] king.'
Read in context
- 21ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
- 22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- 23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- 24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- 25ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
Cross references
- Jeremiah 28:16 ಯೆರೆಮೀಯ 28:16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- 1 Samuel 13:14 1 ಸಮುವೇಲನು 13:14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- Leviticus 20:6 ಯಾಜಕಕಾಂಡ 20:6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- Deuteronomy 18:10–11 ಧರ್ಮೋಪದೇಶಕಾಂಡ 18:10–11ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Jeremiah 29:32 ಯೆರೆಮೀಯ 29:32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Joshua 22:16–19 ಯೆಹೋಶುವ 22:16–19ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು? ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು. ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
- Exodus 22:18 ವಿಮೋಚನಕಾಂಡ 22:18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- Genesis 31:34 ಆದಿಕಾಂಡ 31:34ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
- Ezekiel 2:5–8 ಯೆಹೆಜ್ಕೇಲನು 2:5–8ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Psalm 107:11 ಕೀರ್ತನೆಗಳು 107:11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ