1 Samuel · chapter 16 · verse 3
1 Samuel 16:3 in Kannada
ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
Adakke kartanu--neenu ondu kadasannu ninna sangada takkonduhogi--naanu kartanige yajnyamaaduvadakke bandenu endu heli yajnya vannu arpisuvadakke ishayanannu kareyabeku; aaga neenu maadabekaadaddannu naanu ninage tilisu venu. Naanu ninage yaavana hesarannu helu tteno avanannu neenu nanagoskara abhishekisa beku andanu.
1 Samuel 16:3 in English
- King James Version (KJV)
- And call Jesse to the sacrifice, and I will shew thee what thou shalt do: and thou shalt anoint unto me [him] whom I name unto thee.
- World English Bible (WEB)
- Call Jesse to the sacrifice, and I will show you what you shall do. You shall anoint to me him whom I name to you.”
- American Standard Version (ASV)
- And call Jesse to the sacrifice, and I will show thee what thou shalt do: and thou shalt anoint unto me him whom I name unto thee.
- Bible in Basic English (BBE)
- And send for Jesse to be present at the offering, and I will make clear to you what you are to do: and you are to put the holy oil on him whose name I give you.
- Darby Translation (DBY)
- And call Jesse to the sacrifice, and I will tell thee what thou shalt do; and thou shalt anoint unto me him whom I name unto thee.
- Webster's Bible (WBS)
- And call Jesse to the sacrifice, and I will show thee what thou shalt do: and thou shalt anoint to me [him] whom I name to thee.
- Young's Literal Translation (YLT)
- and thou hast called for Jesse in the sacrifice, and I cause thee to know that which thou dost do, and thou hast anointed to Me him of whom I speak unto thee.'
Read in context
- 1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- 3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
- 4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
- 5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
Cross references
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 1 Samuel 16:12–13 1 ಸಮುವೇಲನು 16:12–13ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 15:11 2 ಸಮುವೇಲನು 15:11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- 1 Samuel 9:12–13 1 ಸಮುವೇಲನು 9:12–13ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ. ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
- Deuteronomy 17:14–15 ಧರ್ಮೋಪದೇಶಕಾಂಡ 17:14–15ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- Exodus 4:15 ವಿಮೋಚನಕಾಂಡ 4:15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- Matthew 22:1–4 ಮತ್ತಾಯನು 22:1–4ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ-- ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.